ಕೆನರಾ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಶಿರಸಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಕೆನರಾ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿ, ಶಿರಸಿಯಲ್ಲಿ ಖಾಲಿ ಇರುವ 41 ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 08/09/2022 ಸಂಜೆ 4.00 ಘಂಟೆ ಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ:
* ಕಿರಿಯ ಮೇಲ್ವಿಚಾಲಕರು
* ಕಿರಿಯ ಗುಮಾಸ್ತರು
ಅರ್ಜಿ ಸಲ್ಲಿಸುವ ವಿಳಾಸ:
ವ್ಯವಸ್ಥಾಪಕ ನಿರ್ದೇಶಕರು ಕೆನರಾ ಡಿಸಿಸಿ
ಬ್ಯಾಂಕ್ ಲಿಮಿಟೆಡ್ ಪ್ರಧಾನ ಕಚೇರಿ ಹೊಸ ಮಾರುಕಟ್ಟೆ ಶಿರಸಿ 581 402
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಮೌಖಿಕ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
- ಆಯ್ಕೆಯಾದ ಅಭ್ಯರ್ಥಿಗೆ ಒಂದು ವರ್ಷದವರೆಗೆ ತರಬೇತಿ ಅವಧಿಯನ್ನು ನಿಗದಿಪಡಿಸಲಾಗಿದೆ .
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಕನಿಷ್ಟ ಶೇಕಡಾ 60 ರಷ್ಟು ಅಂಕಗಳನ್ನು ಮಾನ್ಯತೆ ಪಡೆದಿರುವ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* ಅಭ್ಯರ್ಥಿಗಳು ಕಡ್ಡಾಯವಾಗಿ ಕಂಪ್ಯೂಟರ್ ಆಪರೇಶನ್ ಮತ್ತು ಆಪ್ಲಿಕೇಶನ್ ಜ್ಞಾನ ಹೊಂದಿರಬೇಕು.
* ಕಡ್ಡಾಯವಾಗಿ ಕನ್ನಡ ಮತ್ತು ಇಂಗ್ಲಿಷ್ ಓದಲು ಬರೆಯಲು ಬರಬೇಕು
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಸಾಮಾನ್ಯ ಅಭ್ಯರ್ಥಿಗಳು ರೂ. 590/-
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ರೂ. 295/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು 10-09-2022ರ ಅನ್ವಯ ಅಭ್ಯರ್ಥಿಗಳು ಕನಿಷ್ಠ18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
* ಇತರ ಹಿಂದುಳಿದ ಜಾತಿ ಹಿಂದುಳಿದ ವರ್ಗದವರು 30 ವರ್ಷ ಹಾಗೂ ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳು 35 ವರ್ಷ ಮೀರಿರಬಾರದು.
* ಪರಿಶಿಷ್ಟ ಜಾತಿ , ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ -1 ರಲ್ಲಿಯ ಆಭ್ಯರ್ಥಿಗಳು 40 ವರ್ಷ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ ರೂ.27651 - 52,650/-ರೂಗಳ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.




Comments