ಕೋಲಾರ ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿಮಿಟೆಡ್ ಕೋಲಾರ ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ನಲ್ಲಿ ಖಾಲಿ ಇರುವ ಲೆಕ್ಕ ಪರಿಶೋಧಕ, ಸಹಾಯಕ ವ್ಯವಸ್ಥಾಪಕ ಹಾಗೂ ಚಾಲಕ ಹುದ್ದೆಗಳನ್ನೊಳಗೊಂಡಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 16 ಮಾರ್ಚ್ 2023 ರೊಳಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ : 36
ಲೆಕ್ಕಪರಿಶೋಧಕ - 9
ಸಹಾಯಕ ವ್ಯವಸ್ಥಾಪಕ - 14
ಚಾಲಕ - 3
ಜವಾನರು - 10
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಅನುಗುಣವಾಗುವಂತೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ SSLC/ PUC/ ಪದವಿ ವಿದ್ಯಾರ್ಹತೆಯನ್ನು ಅಂಗೀಕೃತ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಸಾಮಾನ್ಯ/OBC ಅಭ್ಯರ್ಥಿಗಳು 1000/- ರೂ ಅರ್ಜಿ ಶುಲ್ಕವನ್ನು ಹಾಗೂ SC/ST/ಮಾಜಿ ಸೈನಿಕ ಅಭ್ಯರ್ಥಿಗಳು 500/- ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 16-ಮಾರ್ಚ್-2023 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.
OBC ಅಭ್ಯಥಿಗಳಿಗೆ : 03 ವರ್ಷಗಳು ಹಾಗೂ
SC/ST ಅಭ್ಯಥಿಗಳಿಗೆ : 05 ವರ್ಷಗಳ ಕಾಲ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗುವಂತೆ ಮಾಸಿಕ ವೇತನವು 36,000 /-ರೂ ಗಳಿಂದ 67,550/- ರೂ ಗಳ ವರೆಗೆ ನಿಗದಿಪಡಿಸಲಾಗಿದೆ.
- ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.





Comments