ಚಿಕ್ಕಮಗಳೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಚಿಕ್ಕಮಗಳೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ಖಾಲಿ ಇರುವ 85 ಸಹಾಯಕ ವ್ಯವಸ್ಥಾಪಕರು ಮತ್ತು ಕಿರಿಯ ಸಹಾಯಕರು ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದು. ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
- ಈ ಹುದ್ದೆಗಳಿಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ27 ನವೆಂಬರ್ 2024 ರೊಳಗೆ ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದು.
ಹುದ್ದೆಗಳ ವಿವರ : 85
ಸಹಾಯಕ ವ್ಯವಸ್ಥಾಪಕರು - 04
ಪ್ರಥಮ ದರ್ಜೆ ಸಜಯಕರು / ಮೇಲ್ವಿಚಾರಕರು - 18
ಕಿರಿಯ ಸಹಾಯಕರು - 53
ಸಹಾಯಕರು / ಅಟೆಂಡರ್ - 10
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಕರ್ನಾಟಕ ರಾಜ್ಯದ ಅಂಗೀಕೃತ ವಿಶ್ವವಿದ್ಯಾಲಯದ SSLC ಮತ್ತು ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
- ಕಂಪ್ಯೂಟರ್ ಅಪರೇಶನ್ ಮತ್ತು ಅಪ್ಲಿಕೇಶನ್ ಜ್ಞಾನ ಕಡ್ಡಾಯವಾಗಿ ಹೊಂದಿರಬೇಕು. ಕನ್ನಡ ಓದಲು ಬರೆಯಲು ಮತ್ತು ಮಾತನಾಡಲು ಕಡ್ಡಾಯವಾಗಿ ಬರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕ ಪಾವತಿಸಬೇಕು.
* ಸಾಮಾನ್ಯ ಮತ್ತು ಪ್ರವರ್ಗ-1 2(ಎ) 2(ಬಿ) 3(ಎ) 3(ಬಿ) ಇತರೆ ಹಿಂದುಳಿದ ಅಭ್ಯರ್ಥಿಗಳಿಗೆ ರೂ. 1,500/-
* SC, ST, ಪ್ರವರ್ಗ-1 ಅಂಗವಿಕಲ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ. 750/-
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಆರಂಭಗೊಂಡು ಗರಿಷ್ಠ 35 ವರ್ಷಗಳವರೆಗೂ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
- ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.





Comments