ಬೆಂಗಳೂರಿನಲ್ಲಿರುವ DRDO ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಬೆಂಗಳೂರಿನಲ್ಲಿರುವ ಡಿಫೆನ್ಸ್ ರಿಸರ್ಚ್ ಮತ್ತು ಡೆವಲಪ್ಮೆಂಟ್ ಆರ್ಗನೈಜೇಷನ್ಸ್, ಸೆಂಟರ್ ಫಾರ್ ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಅಂಡ್ ರೋಬೋಟಿಕ್ಸ್(DRDO CAIR) ದಲ್ಲಿ ಒಟ್ಟು 33 ಗ್ರಾಜುಯೇಟ್ ಮತ್ತು 01 ಡಿಪ್ಲೊಮ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ದಿನಾಂಕ : 10-12-2021ರೊಳಗಾಗಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.
1) ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂಜಿನಿಯರಿಂಗ್(BE) ಅಥವಾ ತಂತ್ರಜ್ಞಾನದಲ್ಲಿ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
2) ಡಿಪ್ಲೊಮ ಟೆಕ್ನೀಷಿಯನ್ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್ ದಿಂದ ಎಂಜಿನಿಯರಿಂಗ್ ಅಥವಾ ತಂತ್ರಜ್ಞಾನದಲ್ಲಿ ಡಿಪ್ಲೊಮಾ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಪೂರ್ಣಗೊಂಡಿರಬೇಕು, ಮತ್ತು ಗರಿಷ್ಠ 27 ವರ್ಷ ವಯಸ್ಸು ಮೀರಿರಬಾರದು. ನೇಮಕಾತಿ ನಿಯಮನುಸಾರ ವಯೋಮಿತಿಯಲ್ಲಿ ವರ್ಗವಾರು ಸಡಿಲಿಕೆ ಅನ್ವಯವಾಗುವುದು.
1) ಬಿಇ / ಬಿ.ಟೆಕ್ ಗ್ರಾಜಯೇಟ್ ಅಪ್ರೆಂಟಿಸ್ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳು ಪ್ರತಿ ತಿಂಗಳಿಗೆ 9000/- ರೂ ಸ್ಟೈಫಂಡ್ ಪಡೆಯುವರು.
2) ಡಿಪ್ಲೊಮ ಟೆಕ್ನೀಷಿಯನ್ ಅಪ್ರೆಂಟಿಸ್ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳು ಪ್ರತಿ ತಿಂಗಳಿಗೆ 8000/- ರೂ ಸ್ಟೈಫಂಡ್ ಪಡೆಯುವರು.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments