ಚಿತ್ರದುರ್ಗ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಚಿತ್ರದುರ್ಗ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 16 ಅರವಳಿಕೆ ತಜ್ಞರು, ಪ್ರಸೂತಿ ತಜ್ಞರು ಮತ್ತು ಮಕ್ಕಳ ತಜ್ಞರು ಸೇರಿದಂತೆ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ರೋಸ್ಟರ್ ಕಂ ಮೆರಿಟ್ ಆಧಾರದ ಮೇಲೆ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 28/08/2024 ರಂದು ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಹುದ್ದೆಗಳ ವಿವರ : 16
ಅರವಳಿಕೆ ತಜ್ಞರು - 09
ಪ್ರಸೂತಿ ತಜ್ಞರು - 03
ಮಕ್ಕಳ ತಜ್ಞರು - 04
ಸಂದರ್ಶನ ನಡೆಯುವ ಸ್ಥಳ :
ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಚಿತ್ರದುರ್ಗ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 80,000/- ರೂ ಮಾಸಿಕ ವೇತನ ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.




Comments