ಕೋಲಾರ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ

ಕೋಲಾರ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಜಿಲ್ಲಾ ಕಾರ್ಯಕ್ರಮದ ಸಂಯೋಜಕರು ಮತ್ತು ಆರೋಗ್ಯ ಮತ್ತು ಕ್ಷೇಮ ಕೇಂದ್ರ ಸಂಯೋಜಕರು ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನೇರ ಸಂದರ್ಶನವನ್ನು ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 16 ಅಕ್ಟೋಬರ್ 2024 ರಂದು ಬೆಳಿಗ್ಗೆ 10:00 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನದ ವಿಳಾಸ:
Office of the District Health & Family Welfare Officer, NHM Hall, Kolar-563102, Karnataka
ಹುದ್ದೆಗಳ ವಿವರ : 2
ಜಿಲ್ಲಾ ಕಾರ್ಯಕ್ರಮ ಸಂಯೋಜಕರು : 1
ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರದ ಸಂಯೋಜಕರು : 1
ಈ ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಗಳು ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಈ ಕೆಳಗಿನಂತೆ ಮಾಸಿಕ ವೇತನ ನಿಗದಿಪಡಿಸಲಾಗಿದೆ.
- ಜಿಲ್ಲಾ ಕಾರ್ಯಕ್ರಮ ಸಂಯೋಜಕರು : 42000/-
- ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರದ ಸಂಯೋಜಕರು : 30000/-
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.




Comments