ಕೊಪ್ಪಳ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಕೊಪ್ಪಳ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 14 ಅರಿವಳಿಕೆ ತಜ್ಞ, ಮಕ್ಕಳ ತಜ್ಞ, ವಿಕಿರಣಶಾಸ್ತ್ರಜ್ಞ ಮತ್ತು ನರ್ಸಿಂಗ್ ಅಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ರೋಸ್ಟರ್ ಕಂ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 30 ಅಕ್ಟೋಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 14
ಅರಿವಳಿಕೆ ತಜ್ಞ - 1
ಮಕ್ಕಳ ತಜ್ಞ - 1
ವಿಕಿರಣಶಾಸ್ತ್ರಜ್ಞ - 1
ನರ್ಸಿಂಗ್ ಅಧಿಕಾರಿ - 11
ಈ ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಗಳು ಅನುಗುಣವಾಗಿ B.Sc, GNM, MD, DCH, DNB, DA ಪದವಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಪೂರೈಸಿರಬೇಕು. ಕಡ್ಡಾಯವಾಗಿ ಸೇವಾ ಅನುಭವವನ್ನು ಹೊಂದಿರಬೇಕು. ಕರ್ತವ್ಯ ನಿರ್ವಹಿಸಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ಈ ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಗಳು ಕನಿಷ್ಠ 18 ಹಾಗೂ ಗರಿಷ್ಠ 55 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ15,555/- ರೂ ಗಳಿಂದ 1,30,000/- ರೂ ಗಳ ವರೆಗೆ ಮಾಸಿಕ ವೇತನ ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments