Loading..!

ಕೊಪ್ಪಳ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Tags: Degree
Published by: Yallamma G | Date:20 ಮೇ 2025
not found

ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿ ಕೊಪ್ಪಳ ಜಿಲ್ಲೆಯಲ್ಲಿ ಖಾಲಿ ಇರುವ 60 ಶುಶ್ರೂಷಾಧಿಕಾರಿಗಳು, ಸ್ತ್ರೀರೋಗ ತಜ್ಞವೈದ್ಯರು, ಅರಾವಳಿ ತಜ್ಞರು, ಪ್ರಯೋಗ ಶಾಲಾ ತಂತ್ರಜ್ಞ ಅಧಿಕಾರಿಗಳು, ಕಿರಿಯ ಆರೋಗ್ಯ ಸಹಾಯಕರು ಮತ್ತು ವೈದ್ಯಾಧಿಕಾರಿಗಳು ಸೇರಿದಂತೆ ವಿವಿಧ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ  ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಸಲ್ಲಿಸಬಹುದಾಗಿದೆ. 


ಹುದ್ದೆಗಳ ವಿವರ : 60
1 ಚಿಕ್ಕಮಕ್ಕಳ ತಜ್ಞರು : 02
2 ಸ್ತ್ರೀರೋಗ ತಜ್ಞವೈದ್ಯರು : 02
3 ಅರವಳಿಕೆ ತಜ್ಞರು : 01
4 ಫಿಜಿಶಿಯನ್ ಎನ್.ಪಿ.ಪಿ.ಸಿ ಕಾರ್ಯಕ್ರಮ : 02
5 ಫಿಜಿಶಿಯನ್ ಎನ್.ಪಿ.ಎನ್.ಸಿ.ಡಿ ಕಾರ್ಯಕ್ರಮ : 01
6 ಎಂ.ಬಿ.ಬಿ.ಎಸ್ ವೈದ್ಯಾಧಿಕಾರಿಗಳು (ನಮ್ಮ ಕ್ಲಿನಿಕ್) : 07
7 ಎಸ್.ಎನ್.ಸಿ.ಯು ಎಂ.ಬಿ.ಬಿ.ಎಸ್ ವೈದ್ಯಾಧಿಕಾರಿಗಳು : 03
8 ಎನ್‌.ಆರ್.ಸಿ ಎಂ.ಬಿ.ಬಿ.ಎಸ್ ವೈದ್ಯಾಧಿಕಾರಿಗಳು : 01
9 ಹೆಚ್.ಡಿ.ಯು/ಐ.ಸಿ.ಯು(Obstetric) ಎಂಬಿಬಿಎಸ್ ವೈದ್ಯಾಧಿಕಾರಿಗಳು : 07
10 ಹೆಚ್.ಡಿ.ಯು/ಐ.ಸಿ.ಯು ಎಂಬಿಬಿಎಸ್ ವೈದ್ಯಾಧಿಕಾರಿಗಳು : 07
11 ಎಂಬಿಬಿಎಸ್ ವೈದ್ಯಾಧಿಕಾರಿಗಳು (ತಾಯಿ ಆರೋಗ್ಯ : 01
12 ಆರ್.ಬಿ.ಎಸ್.ಕೆ ಎಂಬಿಬಿಎಸ್ ವೈದ್ಯಾಧಿಕಾರಿಗಳು : 01
13 ಎನ್‌.ಪಿ.ಎನ್.ಸಿ.ಡಿ ಎಂಬಿಬಿಎಸ್ ವೈದ್ಯಾಧಿಕಾರಿಗಳು : 02
14 ಎಂ.ಬಿ.ಬಿ.ಎಸ್ ವೈದ್ಯಾಧಿಕಾರಿಗಳು ಇ-ಆಸ್ಪತ್ರೆ ಕಾರ್ಯಕ್ರಮ : 01
15 ಶುಕ್ರೂಷಣಾಧಿಕಾರಿಗಳು : 08
16 ಪ್ರಯೋಗಶಾಲಾ ತಂತ್ರಜ್ಞ ಅಧಿಕಾರಿಗಳು : 07
17 ಕಿರಿಯ ಆರೋಗ್ಯ ಸಹಾಯಕರು (ಆರೋಗ್ಯ ನಿರೀಕ್ಷಣಾಧಿಕಾರಿಗಳು) : 07


ವಯೋಮಿತಿ : 
Pediatrician, Nursing Officer, Laboratory Technician Officer : ಗರಿಷ್ಟ 45 ವರ್ಷ 
Gynecologist, Anesthesiologist : ಗರಿಷ್ಟ 70 ವರ್ಷ
Physician : ಗರಿಷ್ಟ 50 ವರ್ಷ
MBBS Medical Officer : ಗರಿಷ್ಟ 65 ವರ್ಷ
Junior Health Assistants (Health Inspectors) : ಗರಿಷ್ಟ 35 ವರ್ಷ


ವಿದ್ಯಾರ್ಹತೆ : 
- ಚಿಕ್ಕಮಕ್ಕಳ ತಜ್ಞರು : ಡಿ.ಎಂ.ಒ/ನಿಯೋನಾಟಲಜಿ/ ಫಿಲೋಶಿಪ್ ಇನ್ ನಿಯೋನಾಟಲಾಜಿ, ಎಂ.ಡಿ ಪಿಡಿಯಾರ್ಟಿಕ್, ಡಿಎನ್‌ಡಿ (ಮಕ್ಕಳ ಆರೋಗ್ಯ)/ಡಿಸಿಹೆಚ್ ಹಾಗೂ ಕರ್ನಾಟಕ ಮೆಡಿಕಲ್ ಕೌನ್ಸಿಲ್‌ನಲ್ಲಿ ನೊಂದಣಿಯಾಗಿರಬೇಕು.  
- ಸ್ತ್ರೀರೋಗ ತಜ್ಞವೈದ್ಯರು: ಡಿಜಿಓ/ಡಿಎನ್‌ಬಿ/ಎಂ.ಡಿ (ಓ.ಬಿ.ಜಿ), ಹಾಗೂ ಕರ್ನಾಟಕ ಮೆಡಿಕಲ್ ಕೌನ್ಸಿಲ್‌ನಲ್ಲಿ ನೊಂದಣಿಯಾಗಿರಬೇಕು. 
- ಅರವಳಿಕೆ ತಜ್ಞರು: ಡಿಎ/ಡಿಎನ್‌ ಬಿ/ಎಂ.ಡಿ (ಅನಸ್ತೇಶಿಯಾ) ಹಾಗೂ ಕರ್ನಾಟಕ ಮೆಡಿಕಲ್ ಕೌನ್ಸಿಲ್‌ನಲ್ಲಿ ನೊಂದಣಿಯಾಗಿರಬೇಕು.
-ಫಿಜಿಶಿಯನ್ (ಎನ್.ಪಿ.ಪಿ.ಸಿ ಕಾರ್ಯಕ್ರಮ: ಎಂ.ಬಿ.ಬಿ.ಎಸ್. (ಆದ್ಯತೆ: ಮೆಡಿಸಿನ್/ಅನಸ್ತೇಶಿಯಾ (ಡಿಪ್ಲೊಮಾ/ಸ್ನಾತಕೋತ್ತರ)/ ರೇಡಿಯೋಥೆರಪಿ (ಡಿಪ್ಲೊಮಾ/ಸ್ನಾತಕೋತ್ತರ ಆಸ್ಪತ್ರೆಯಲ್ಲಿ ಕನಿಷ್ಠ 03 ವರ್ಷ ಕೆಲಸ ಮಾಡಿದ ಅನುಭವ. 
- ಫಿಜಿಶಿಯನ್ (ಎನ್.ಪಿ.ಎನ್.ಸಿ.ಡಿ. ಕಾರ್ಯಕ್ರಮ): ಎಂ.ಬಿ.ಬಿ.ಎಸ್. ಎಂ.ಡಿ. ಆಸ್ಪತ್ರೆಯಲ್ಲಿ ಕನಿಷ್ಠ 03 ವರ್ಷ ಕೆಲಸ ಮಾಡಿದ ಅನುಭವ. (ಆದ್ಯತೆ: ರಾ.ಆ.ಕಾರ್ಯಕ್ರಮದಡಿಯಲ್ಲಿ ಕೆಲಸದ ಅನುಭವ)
- ಎಂ.ಬಿ.ಬಿ.ಎಸ್ ವೈದ್ಯಾಧಿಕಾರಿಗಳು (ನಮ್ಮ ಕ್ಲಿನಿಕ್) : ಎಂ.ಬಿ.ಬಿ.ಎಸ್ ಪದವಿಯನ್ನು ಪೂರ್ಣಗೊಳಿಸಿರಬೇಕು ಮತ್ತು ಕರ್ನಾಟಕ ವೈದ್ಯಕೀಯ ಕೌನ್ಸಿಲ್‌ನಲ್ಲಿ ನೊಂದಣಿಯಾಗಿರಬೇಕು.
- ಎಸ್.ಎನ್.ಸಿ.ಯು ಎಂ.ಬಿ.ಬಿ.ಎಸ್ ವೈದ್ಯಾಧಿಕಾರಿಗಳು:- ಎಂ.ಬಿ.ಬಿ.ಎಸ್ ಪದವಿಯನ್ನು ಪೂರ್ಣಗೊಳಿಸಿರಬೇಕು ಕರ್ನಾಟಕ ವೈದ್ಯಕೀಯ ಕೌನ್ಸಿಲ್‌ನಲ್ಲಿ ನೊಂದಣಿಯಾಗಿರಬೇಕು.
- ಎನ್‌.ಆರ್.ಸಿ. ಎಂ.ಬಿ.ಬಿ.ಎಸ್ ವೈದ್ಯಾಧಿಕಾರಿಗಳು:- ಎಂ.ಬಿ.ಬಿ.ಎಸ್ ಪದವಿಯನ್ನು ಪೂರ್ಣಗೊಳಿಸಿರಬೇಕು. ಕರ್ನಾಟಕ ವೈದ್ಯಕೀಯ ಕೌನ್ಸಿಲ್‌ನಲ್ಲಿ ನೊಂದಣಿಯಾಗಿರಬೇಕು.
- ಎಂ.ಬಿ.ಬಿ.ಎಸ್ ವೈದ್ಯಾಧಿಕಾರಿಗಳು (ಹೆಚ್‌ಡಿಯು/ಐ.ಸಿ.ಯು (Obstetric):- ಎಂ.ಬಿ.ಬಿ.ಎಸ್ ಉತ್ತೀರ್ಣರಾಗಿರಬೇಕು ಮತ್ತು ಕಡ್ಡಾಯವಾಗಿ ಇಂಟರ್‌ಶಿಪ್ ಪೂರೈಸಿರಬೇಕು. ಕರ್ನಾಟಕ ವೈದ್ಯಕೀಯ ಕೌನ್ಸಿಲ್‌ನಲ್ಲಿ ನೊಂದಣಿಯನ್ನು ಹೊಂದಿರಬೇಕು.
- ಎಂ.ಬಿ.ಬಿ.ಎಸ್ ವೈದ್ಯಾಧಿಕಾರಿಗಳು (ಹೆಚ್‌ಡಿಯು/ಐ.ಸಿ.ಯು):-ಎಂ.ಬಿ.ಬಿ.ಎಸ್ ಉತ್ತೀರ್ಣರಾಗಿರಬೇಕು ಮತ್ತು ಕಡ್ಡಾಯವಾಗಿ ಇಂಟರ್‌ಶಿಪ್ ಪೂರೈಸಿರಬೇಕು. ಕರ್ನಾಟಕ ವೈದ್ಯಕೀಯ ಕೌನ್ಸಿಲ್‌ನಲ್ಲಿ ನೊಂದಣಿಯನ್ನು ಹೊಂದಿರಬೇಕು. ಸಂಬಂಧಪಟ್ಟ ವಿಶ್ವವಿದ್ಯಾಲಯದಿಂದ Convocation/Degree Certificate ನ್ನು ಕಡ್ಡಾಯವಾಗಿ ಹೊಂದಿರಬೇಕು.
- ಎಂ.ಬಿ.ಬಿ.ಎಸ್ ವೈದ್ಯಾಧಿಕಾರಿಗಳು (ತಾಯಿ ಆರೋಗ್ಯ:- ಎಂ.ಬಿ.ಬಿ.ಎಸ್ ಉತ್ತೀರ್ಣರಾಗಿರಬೇಕು ಮತ್ತು ಕಡ್ಡಾಯವಾಗಿ ಇಂಟರ್‌ ಶಿಪ್ ಪೂರೈಸಿರಬೇಕು. 
- ಎಂ.ಬಿ.ಬಿ.ಎಸ್ ವೈದ್ಯಾಧಿಕಾರಿಗಳು (ಆರ್.ಬಿ.ಎಸ್.ಕೆ):-ಎಂ.ಬಿ.ಬಿ.ಎಸ್ ಉತ್ತೀರ್ಣರಾಗಿರಬೇಕು ಮತ್ತು ಕಡ್ಡಾಯವಾಗಿ ಇಂಟರ್‌ ಶಿಪ್ ಪೂರೈಸಿರಬೇಕು. ಕರ್ನಾಟಕ ವೈದ್ಯಕೀಯ ಕೌನ್ಸಿಲ್‌ನಲ್ಲಿ ನೊಂದಣಿಯನ್ನು ಹೊಂದಿರಬೇಕು.
- ಎಂ.ಬಿ.ಬಿ.ಎಸ್ ವೈದ್ಯಾಧಿಕಾರಿಗಳು (ಎನ್.ಪಿ.ಎನ್.ಸಿ.ಡಿ ಕಾರ್ಯಕ್ರಮ:- ಎಂ.ಬಿ.ಬಿ.ಎಸ್ ಉತ್ತೀರ್ಣರಾಗಿರಬೇಕು ಆಸ್ಪತ್ರೆಯಲ್ಲಿ ಕನಿಷ್ಠ 03 ವರ್ಷ ಕೆಲಸ ಮಾಡಿದ ಅನುಭವ.  
- ಎಂ.ಬಿ.ಬಿ.ಎಸ್ ವೈದ್ಯಾಧಿಕಾರಿಗಳು (ಇ-ಆಸ್ಪತ್ರೆ ಕಾರ್ಯಕ್ರಮ:- ಎಂ.ಬಿ.ಬಿ.ಎಸ್ ಉತ್ತೀರ್ಣರಾಗಿರಬೇಕು ಮತ್ತು ಕಡ್ಡಾಯವಾಗಿ ಇಂಟರ್‌ ಶಿಪ್ ಪೂರೈಸಿರಬೇಕು. ಕರ್ನಾಟಕ ವೈದ್ಯಕೀಯ ಕೌನ್ಸಿಲ್‌ನಲ್ಲಿ ನೊಂದಣಿಯನ್ನು ಹೊಂದಿರಬೇಕು.
- ಶುಕ್ರೂಷಣಾಧಿಕಾರಿಗಳು: ಬಿ.ಎಸ್.ಸಿ. ನರ್ಸಿಂಗ್ ಅಥವಾ ಪೋಸ್ಟ್ ಸರ್ಟಿಫೈಡ್ ಬಿ.ಎಸ್.ಸಿ. ನರ್ಸಿಂಗ್ ಅಥವಾ ಡಿಪ್ಲೋಮಾ ಇನ್ ನರ್ಸಿಂಗ್ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು. ಹಾಗೂ ಕರ್ನಾಟಕ ನರ್ಸಿಂಗ್ ಕೌನ್ಸಲಿಂಗ್‌ನಲ್ಲಿ ಕಡ್ಡಾಯವಾಗಿ ನೋಂದಣಿಯಾಗಿರಬೇಕು. 
- ಪ್ರಯೋಗಶಾಲಾ ತಂತ್ರಜ್ಞ ಅಧಿಕಾರಿಗಳು: ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು ಮತ್ತು ಕರ್ನಾಟಕ ರಾಜ್ಯ ಅರೆವೈದ್ಯಕೀಯ ಮಂಡಳಿಯು ನಡೆಸುವ ಪ್ರಯೋಗಶಾಲಾ ತಂತ್ರಜ್ಞತೆಯಲ್ಲಿ 03 ವರ್ಷದ ಡಿಪ್ಲೋಮಾ ಕೋರ್ಸ್‌ನಲ್ಲಿ ಉತ್ತೀರ್ಣ ಹೊಂದಿರಬೇಕು.
- ಕಿರಿಯ ಆರೋಗ್ಯ ಸಹಾಯಕರು : ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು ಮತ್ತು ಕರ್ನಾಟಕ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ವಿವಿದೋದ್ದೇಶ ಮೂಲ ಆರೋಗ್ಯ ಕಾರ್ಯಕರ್ತರ ತರಬೇತಿಯನ್ನು ಪಡೆದಿರಬೇಕು.


ವೇತನ: ರಾಜ್ಯದ ಮಾರ್ಗಸೂಚಿಯನ್ವಯ ವೇತನ ಪಾವತಿಸಲಾಗು.


ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನ


ಅರ್ಜಿ ಸಲ್ಲಿಸುವ ವಿಧಾನ : 
- ಮೊದಲನೆಯದಾಗಿ DHFWS ಕೊಪ್ಪಳ ನೇಮಕಾತಿ ಅಧಿಸೂಚನೆ 2025 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ (ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ).
- ಆನ್‌ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪ್ರೂಫ್, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
- DHFWS ಕೊಪ್ಪಳ ನರ್ಸಿಂಗ್ ಅಧಿಕಾರಿ, MBBS ವೈದ್ಯಕೀಯ ಅಧಿಕಾರಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ - ಕೆಳಗೆ ನೀಡಲಾದ ಲಿಂಕ್ ಅನ್ನು ಕ್ಲಿಕ್ ಮಾಡಿ.
- DHFWS ಕೊಪ್ಪಳ ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಛಾಯಾಚಿತ್ರದೊಂದಿಗೆ (ಅನ್ವಯಿಸಿದರೆ) ಅಗತ್ಯ  ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.
- ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ) ಕೊನೆಯದಾಗಿ DHFWS ಕೊಪ್ಪಳ ನೇಮಕಾತಿ 2025 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ. ಪ್ರಮುಖವಾಗಿ ಅರ್ಜಿ ಸಂಖ್ಯೆ ಅಥವಾ ಹೆಚ್ಚಿನ ಉಲ್ಲೇಖಕ್ಕಾಗಿ ವಿನಂತಿ ಸಂಖ್ಯೆಯನ್ನು ಸೆರೆಹಿಡಿಯಿರಿ.


ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 19-05-2025
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-ಮೇ-2025

Application End Date:  28 ಮೇ 2025
To Download Official Notification
DHFWS Koppal Recruitment 2025​
District Health and Family Welfare Society Koppal Jobs​
Koppal Health Department Vacancies 2025​
DHFWS Karnataka Job Notification 2025​
Koppal Government Health Jobs​

Comments