ಮೈಸೂರು ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಮೈಸೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ನಿರ್ದೇಶನಾಲಯದಲ್ಲಿ ಖಾಲಿ ಇರುವ 77 ಮೆಡಿಕಲ್ ಆಫೀಸರ್, ಲ್ಯಾಬ್ ಟೆಕ್ನಿಷಿಯನ್, ಫಿಸಿಯೋಥೆರಪಿಸ್ಟ್, ಸ್ಟಾಪ್ ನರ್ಸ್ ಮತ್ತು ಆಯುಷ ವೈದ್ಯರು ಸೇರಿದಂತೆ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
- ದಿನಾಂಕ 31/08/2023 ರಂದು ನಡೆಯುವ ನೇರ ಸಂದರ್ಶನದಲ್ಲಿ ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ MBBS/ BAMS/ Diploma/ PUC/ B.sc/ M.sc ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 45 ವರ್ಷಗಳನ್ನು ಪೂರೈಸಿರಬೇಕು ಮತ್ತು ಗರಿಷ್ಠ 60 ವರ್ಷ ವಯೋಮಿತಿಗಳನ್ನು ಮೀರಿರಬಾರದು
ಈ ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳು ಮಾಸಿಕ ವೇತನವನ್ನು ಪಡೆಯಲಿದ್ದಾರೆ.
- ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.





Comments