ರಾಯಚೂರು ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ರಾಯಚೂರು ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ನಿರ್ದೇಶನಾಲಯದ ಅಡಿಯಲ್ಲಿ ಖಾಲಿ ಇರುವ 76 ಸ್ತ್ರೀರೋಗ ತಜ್ಞರು, ಶುಶೂಷಕರು, ಮಕ್ಕಳ ತಜ್ಞರು ಮತ್ತು ತಾಲೂಕಾ ಆಶಾ ಮೇಲ್ವಿಚಾರಕರು, ಕಿರಿಯ ಮಹಿಳಾ ಆರೋಗ್ಯ ಸಹಾಯಕಿ, ಆರೋಗ್ಯ ನಿರೀಕ್ಷಣಾಧಿಕಾರಿಗಳು, ಮತ್ತು ತಾಂತ್ರಿಕ ಮೇಲ್ವಿಚಾರಕರು ಸೇರಿದಂತೆ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
ಹುದ್ದೆಗಳ ವಿವರ : 76
ಸ್ತ್ರೀ ರೋಗ ತಜ್ಞರು-03
ಮಕ್ಕಳ ತಜ್ಞರು-02
ಎಂ.ಬಿ.ಬಿ.ಎಸ್. ಎಸ್.ಎನ್.ಸಿ.ಯು. ವಿಭಾಗ-03
ಎಂ.ಬಿ.ಬಿ.ಎಸ್. ಹೆಚ್.ಡಿ.ಯು. ವಿಭಾಗ -11
ಎಂ.ಬಿ.ಬಿ.ಎಸ್. ಎನ್.ಯು.ಹೆಚ್.ಎಂ.-01
ಎಂ.ಬಿ.ಬಿ.ಎಸ್. ನಮ್ಮ ಕ್ಲಿನಿಕ್-04
ಕ್ಷೇತ್ರ ಕಾರ್ಯಕ್ರಮ ವ್ಯವಸ್ಥಾಪಕರು-01
ತಾಲೂಕಾ ಆಶಾ ಮೇಲ್ವಿಚಾರಕರು-01
ಶುಶೂಷಕರು-32 |
ಕಿರಿಯ ಮಹಿಳಾ ಆರೋಗ್ಯ ಸಹಾಯಕಿ-03
ಆರೋಗ್ಯ ನಿರೀಕ್ಷಣಾಧಿಕಾರಿಗಳು- 10
ತಾಲೂಕ ವಿ.ಬಿ.ಡಿ. ತಾಂತ್ರಿಕ ಮೇಲ್ವಿಚಾರಕರು-01
ಈ ಹುದ್ದೆಗಳಿಗೆ ಅಭ್ಯರ್ಥಿಗಳು ಹುದ್ದೆಗೆ ಅನುಗುಣವಾಗಿ MBBS, SSLC, BBM, B.sc in Nursing, ಪದವಿ ವಿದ್ಯಾರ್ಹತೆಯನ್ನು ಪೂರೈಸಿರಬೇಕು. ಕಡ್ಡಾಯವಾಗಿ ಸೇವಾ ಅನುಭವವನ್ನು ಹೊಂದಿರಬೇಕು. ಕರ್ತವ್ಯ ನಿರ್ವಹಿಸಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ಈ ಹುದ್ದೆಗಳಿಗೆ ಅಭ್ಯರ್ಥಿಗಳು ಹುದ್ದೆಗೆ ಅನುಗುಣವಾಗಿ ಗರಿಷ್ಠ 70 ವರ್ಷ ವಯೋಮಿತಿಯನ್ನು ಮೀರಿರಬಾರದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments