ಹಾವೇರಿ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ

ಹಾವೇರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ನಿರ್ದೇಶನಾಲಯದಲ್ಲಿ ಖಾಲಿ ಇರುವ 17 ಫಿಜಿಷಿಯನ್, ಶುಶ್ರೋಷಾಧಿಕಾರಿ, MBBS ವೈದ್ಯರು ಮತ್ತು ಫಿಜಿಯೋಥೆರಪಿಸ್ಟ್ ಸೇರಿದಂತೆ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಸಲ್ಲಿಸಬಹುದಾಗಿದೆ.
- ದಿನಾಂಕ 20/09/2023 ರಂದು ಬೆಳ್ಳಿಗೆ 10:00 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
ಜಿಲ್ಲಾ ಸರ್ವೇಕ್ಷಣ ಘಟಕ, ತಾಲೂಕ ಆರೋಗ್ಯಾಧಿಕಾರಿಗಳ ಕಚೇರಿ ಆವರಣ ಹಾವೇರಿ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ರಿಂದ ಗರಿಷ್ಠ 50 ವರ್ಷ ವಯೋಮಿತಿಯೊಳಗಿರಬೇಕು.
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ವಿವಿಧ ರೀತಿಯ ಮಾಸಿಕ ವೇತನವನ್ನು ನಿಗದಿಪಡಿಸಿದೆ.
- ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿ ಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments