ಕಲಬುರಗಿ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ

ಕಲಬುರಗಿ ಜಿಲ್ಲಾ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಖಾಲಿ ಇರುವ 63 ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು, ಶಶ್ರೂಷಣಾಧಿಕಾರಿಗಳು, ಕಿರಿಯ ಆರೋಗ್ಯ ಸಹಾಯಕರು, ಐಸಿಯು ಶುಶ್ರೂಷಣಾಧಿಕಾರಿಗಳು, ಮತ್ತು ಸಾಮಾನ್ಯ ವೈದ್ಯರು ಸೇರಿದಂತೆ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಮೆರಿಟ್ ಕಂ ರೋಸ್ಟರ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ SSLC/ PU (SCIENCE)/ GNM/ ANM/ (B.sc/M.sc/Deploma in Nursing)/ BAMS/ MBBS ವಿದ್ಯಾರ್ಹತೆಯನ್ನು ಪೂರೈಸಿರಬೇಕು. ಕರ್ತವ್ಯ ನಿರ್ವಹಿಸಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ಈ ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಗಳು ಗರಿಷ್ಠ 50 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ವಿವಿಧ ರೀತಿಯ ಮಾಸಿಕ ವೇತನವನ್ನು ನಿಗದಿಪಡಿಸಿದೆ.
- ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿ ಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments