ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯದಲ್ಲಿ ಖಾಲಿ ಇರುವ 02 ಸಕಾಲ ಕಾನ್ಸ್ ಲ್ ಮೆಂಟ್ ಮತ್ತು ಹೆಲ್ಪ್ ಡೆಸ್ಕ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು.ಕೊನೆಯ ದಿನಾಂಕ 10 -01-2024 ರ ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 02
ಸಕಾಲ ಕಾನ್ಸ್ ಲ್ ಮೆಂಟ್ - 01
ಹೆಲ್ಪ್ ಡೆಸ್ಕ್ - 01
ಸಂದರ್ಶನ ನೆಡೆಯುವ ಸ್ಥಳ :
ಸಭೆಯ ಸಭಾಂಗಣ.
3 ನೇ ಮಹಡಿ, ಅರೋಗ್ಯ ಮತ್ತು ಕುಟುಂಬ
ಕಲ್ಯಾಣ ಸೇವೆಗಳ ನಿರ್ದೇಶನಾಲಯ,
ಅರೋಗ್ಯ ಸೌಧ, ಮಾಗಡಿ ರಸ್ತೆ,
ಬೆಂಗಳೂರು - 560 023
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅಭ್ಯರ್ಥಿಗಳು ಹುದ್ದೆಗೆ ಅನುಗುಣವಾಗಿ ಪದವಿ ವಿದ್ಯಾರ್ಹತೆಯನ್ನು ಪೂರೈಸಿರಬೇಕು. ಕಡ್ಡಾಯವಾಗಿ ಕನಿಷ್ಠ 2 ವರ್ಷದ ಸೇವಾ ಅನುಭವವನ್ನು ಹೊಂದಿರಬೇಕು. ಕನ್ನಡ ಮಾತನಾಡುವ / ಬರಹ ಜ್ಞಾನ ಹೊಂದಿರಬೇಕು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ವಿವಿಧ ರೀತಿಯ ಮಾಸಿಕ ವೇತನವನ್ನು ನಿಗದಿಪಡಿಸಿದೆ.
- ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿ ಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments