ಉಡುಪಿ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ನಿರ್ದೇಶನಾಲಯದಲ್ಲಿ ಖಾಲಿ ಇರುವ 06 ಜೂನಿಯರ್ ಹೆಲ್ತ್ ಅಸಿಸ್ಟೆಂಟ್ ಸೇರಿದಂತೆ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಸಲ್ಲಿಸಬಹುದಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ರೋಸ್ಟರ್ ಕಂ ಮೆರಿಟ್ ಆಧಾರದ ಮೂಲಕ ಆಯ್ಕೆ ಮಾಡಲಾಗುತ್ತದೆ.
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ03 ಆಗಸ್ಟ್ 2024 ದೊಳಗಾಗಿ ಅರ್ಜಿಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ :
District Project Management Unit, NHM, Office of the District Health & Family Welfare Officers, Udupi, Karnataka
ಈ ಹುದ್ದೆಗಳಿಗೆ ಅಭ್ಯರ್ಥಿಗಳು ಹುದ್ದೆಗೆ ಅನುಗುಣವಾಗಿ 10th, Diploma, PUC, ಪದವಿ ವಿದ್ಯಾರ್ಹತೆಯನ್ನು ಪೂರೈಸಿರಬೇಕು. ಕಡ್ಡಾಯವಾಗಿ ಸೇವಾ ಅನುಭವವನ್ನು ಹೊಂದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 14,044/- ರೂ ಗಳಿಂದ 15,397/- ರೂ ಗಳ ವರೆಗೆ ಮಾಸಿಕ ವೇತನ ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments