Loading..!

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯದಲ್ಲಿ ತಾಂತ್ರಿಕ ಸಹಾಯಕ ಹುದ್ದೆಗೆ ನೇರ ಸಂದರ್ಶನ
Published by: Mallappa Myageri | Date:10 ನವೆಂಬರ್ 2021
not found

ಕರ್ನಾಟಕ ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯದಲ್ಲಿ ಖಾಲಿ ಇರುವ ತಾಂತ್ರಿಕ ಸಹಾಯಕರು ಹುದ್ದೆಯನ್ನು ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ನೇರ ಸಂದರ್ಶನ ನಡೆಸಲಾಗುತ್ತಿದ್ದು, ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ದಿನಾಂಕ: 19-11-2021ರ ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 01:00 ರ ವರೆಗೆ ನಡೆಯುವ ದಾಖಲೆಗಳ ಪರಿಶೀಲನೆ ಮತ್ತು ಮಧ್ಯಾಹ್ನ 02:00 ರಿಂದ ಸಂಜೆ 04:00 ರ ವರೆಗೆ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಲು ಸೂಚಿಸಿದೆ.
ಸಂದರ್ಶನ ನಡೆಯುವ ಸ್ಥಳ: 
ನಿರ್ದೇಶಕರು, 
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ, 
ಆರೋಗ್ಯಸೌಧ, 1ನೇ ಅಡ್ಡರಸ್ತೆ, ಮಾಗಡಿ ರಸ್ತೆ, ಬೆಂಗಳೂರು-23.

No. of posts:  1
Application Start Date:  19 ನವೆಂಬರ್ 2021
Application End Date:  19 ನವೆಂಬರ್ 2021
Work Location:  ಬೆಂಗಳೂರು
Selection Procedure:
ಅಭ್ಯರ್ಥಿಯನ್ನು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:

ತಾಂತ್ರಿಕ ಸಹಾಯಕ ಹುದ್ದೆಗೆ ಸಂದರ್ಶನದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಇ/ಬಿಟೆಕ್ ನಲ್ಲಿ ಕಂಪ್ಯೂಟರ್ ಸೈನ್ಸ್ ಅಥವಾ ಐ.ಟಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಅಭ್ಯರ್ಥಿಗಳಿಗೆ ಕನ್ನಡ ಮತ್ತು ಇಂಗ್ಲೀಷ್ ನಲ್ಲಿ ಉತ್ತಮ ಟೈಪಿಂಗ್ ಹೊಂದಿರಬೇಕು ಮತ್ತು ಬಹುಭಾಷೆಗಳಲ್ಲಿ ಉತ್ತಮ ಸಂವಹನ ಕೌಶಲ್ಯ ಜ್ಞಾನವಿರಬೇಕು.

Age Limit:
ತಾಂತ್ರಿಕ ಸಹಾಯಕ ಹುದ್ದೆಗೆ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳಿಗೆ ಮಾತ್ರ ಸಂದರ್ಶನಕ್ಕೆ ಹಾಜರಾಗಲು ಸೂಚಿಸಿದೆ.
Pay Scale:
ತಾಂತ್ರಿಕ ಸಹಾಯಕ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 50,000/-ರೂ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
To Download the Official News Paper notification

Comments

ಮಲ್ಲಿಕಾರ್ಜುನ್ Poleshi ನವೆಂ. 12, 2021, 4:35 ಅಪರಾಹ್ನ