ಧಾರವಾಡ ಜಿಲ್ಲಾ ವ್ಯಾಪ್ತಿಯಲ್ಲಿ ಖಾಲಿ ಇರುವ ವೈದ್ಯಕೀಯ ಹಾಗೂ ಇತರೆ ವೃಂದದ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Surekha Halli | Date:3 ಮೇ 2021

ಜಿಲ್ಲಾ ಶಸ್ತ್ರಚಿಕಿತ್ಸಕರ ಕಾರ್ಯಾಲಯ ಧಾರವಾಡ ಇಲ್ಲಿ ಖಾಲಿ ಇರುವ ಅರೆ ವೈದ್ಯಕೀಯ ಹಾಗೂ ಇತರೆ ವೃಂದದ ಹುದ್ದೆಗಳಿಗೆ 6 ತಿಂಗಳ ಅವಧಿಗೆ ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಲು ದಿನಾಂಕ 04-05-2021 ಹಾಗೂ 05-05-2021 ರಂದು ಬೆಳಿಗ್ಗೆ 11:00 ಗಂಟೆಯಿಂದ ಸಾಯಂಕಾಲ 04:30 ಗಂಟೆಯವರೆಗೆ ಧಾರವಾಡ ಜಿಲ್ಲಾ ಆಸ್ಪತ್ರೆಯ ಸಭಾಭವನದಲ್ಲಿ ನೇರ ಸಂದರ್ಶನ ನಡೆಸಲಾಗುವುದು.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ವಿದ್ಯಾರ್ಹತೆ ಮತ್ತು ಸಂಬಂಧಪಟ್ಟ ಎಲ್ಲಾ ಮೂಲ ದಾಖಲಾತಿಗಳನ್ನು ಮತ್ತು ಇತ್ತೀಚಿನ ಭಾವಚಿತ್ರ, ಆಧಾರ್ ಕಾರ್ಡ್ ಹಾಗೂ ಒಂದು ನಕಲು ಪ್ರತಿಯೊಂದಿಗೆ ಸಂದರ್ಶನಕ್ಕೆ ಹಾಜರಾಗಬೆಕು.
* ಹುದ್ದೆಗಳ ವಿವರ :
- ಶುಶ್ರೂಷಕರು - 30
- ಫಾರ್ಮಸಿಸ್ಟ್ - 03
- ಡಿ ವರ್ಗ ನೌಕರರು - 30
- ಭದ್ರತಾ ಸಿಬ್ಬಂದಿ - 15
- ಕಂಪ್ಯೂಟರ್ ಆಪರೇಟರ್ - 02
No. of posts: 80
Application Start Date: 3 ಮೇ 2021
Application End Date: 5 ಮೇ 2021
Age Limit:
ವಯೋಮಿತಿ : ಕನಿಷ್ಟ 18 ವರ್ಷ ವಯಸ್ಸನ್ನು ಹೊಂದಿರಬೇಕು ಹಾಗೂ ಗರಿಷ್ಟ 40 ವರ್ಷ ವಯಸ್ಸನ್ನು ಮೀರಿರಬಾರದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಪತ್ರಿಕಾ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments