ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO)ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ(DRDO) ಕಾಂಬಾಟ್ ವೆಹಿಕಲ್ ರಿಸರ್ಚ್ ಅಂಡ್ ಡೆವಲಪ್ಮೆಂಟ್ ಎಸ್ಟಾಬ್ಲಿಶ್‌ಮೆಂಟ್ ವಿಭಾಗದಲ್ಲಿ ಖಾಲಿ ಇವರುವ ಜೂನಿಯರ್ ರಿಸರ್ಚ್ ಫೆಲೊ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 03/02/2022 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಕ್ರೀನಿಂಗ್ ಟೆಸ್ಟ್ ಮತ್ತು ಸಿಬಿಟಿ ಟೆಸ್ಟ್ / ಲಿಖಿತ ಪರೀಕ್ಷೆ, ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು B.E / B.Tech ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪೂರೈಸಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿ ಪೂರೈಸಿರಬೇಕು ಹಾಗೂ ಗರಿಷ್ಠ ಈ ಕೆಳಗಿನ ವಯೋಮಿತಿಯನ್ನು ಮೀರಿರಬಾರದು,
* ಸಾಮಾನ್ಯವರ್ಗ 28 ವರ್ಷ
* ಹಿಂದುಳಿದ ವರ್ಗ 31 ವರ್ಷ
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ 33 ವರ್ಷಗಳ ಗರಿಷ್ಠ ವಯೋಮಿತಿಗಳನ್ನು ಮೀರಿರಬಾರದು.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.





Comments