ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ಯಲ್ಲಿ ಖಾಲಿ ಇರುವ 27 ಚೇರ್ ಪರ್ಸನ್, ಮತ್ತು ಫೆಲೋಶಿಪ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 16-06-2023 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ : 27
- DRDO ಚೇರ್ ಪರ್ಸನ್ - 03
- DRDO ಡಿಸ್ಟಿಂಗ್ವಿಶ್ಡ್ ಫೆಲ್ಲೋಶ್ರಪ್ - 06
- DRDO ಫೆಲೋಶಿಪ್ - 09
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡುವ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ M.sc/ B.E/ B.Tech/ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಗರಿಷ್ಠ 62 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 80,000 /– ರೂ ಗಳಿಂದ 1,25,000/- ರೂ ಗಳ ವರೆಗೆ ಮಾಸಿಕ ವೇತನ ನಿಗದಿ ಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.



Comments