Loading..!

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ
Published by: Yallamma G | Date:21 ನವೆಂಬರ್ 2024
not found

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ಯ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲೆಕ್ಟ್ರಾನಿಕ್ಸ್ ಮತ್ತು ರಾಡಾರ್ ಡೆವಲಪ್‌ಮೆಂಟ್ ಎಸ್ಟಾಬ್ಲಿಷ್‌ಮೆಂಟ್  (LRDE)ನಲ್ಲಿ ಖಾಲಿ ಇರುವ 10 ಎಲೆಕ್ಟ್ರಿಕಲ್ ಇಂಜಿನಿಯರಿಂಗ್, ಮೆಕ್ಯಾನಿಕಲ್ ಇಂಜಿನಿಯರಿಂಗ್, ಎಲೆಕ್ಟ್ರಾನಿಕ್ & ಕಮ್ಯುನಿಕೇಟಿಂಗ್ ಇಂಜಿನಿಯರಿಂಗ್ ಮತ್ತು ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.


ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  10
Application Start Date:  21 ನವೆಂಬರ್ 2024
Application End Date:  10 ಡಿಸೆಂಬರ್ 2024
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶರ್ಟ್ ಲಿಸ್ಟ್ ಮಾಡಿ ದಾಖಲೆ ಪರಿಶೀಲನೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.


ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ದಿನಾಂಕ 10/12/2024 ರೊಳಗಾಗಿ ಇ-ಮೇಲ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸುವ ಇ-ಮೇಲ್ ವಿಳಾಸ : 
hrdirde2010[at]gmail.com  


ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 12, 13 ಡಿಸೆಂಬರ್ 2024 ರಂದು ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸಿವುದರ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ : 
Electronics & Radar Development Establishment (LRDE), DRDO Township, CV Raman Nagar, Bengaluru – 560093


ಹುದ್ದೆಗಳ ವಿವರ : 10
- ಎಲೆಕ್ಟ್ರಾನಿಕ್ & ಕಮ್ಯುನಿಕೇಷನ್ ಇಂಜಿನಿಯರಿಂಗ್ : 5
- ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ : 2
- ಎಲೆಕ್ಟ್ರಿಕಲ್ ಇಂಜಿನಿಯರಿಂಗ್ : 2 
- ಮೆಕ್ಯಾನಿಕಲ್ ಇಂಜಿನಿಯರಿಂಗ್ : 1

Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು B.E/ B.Tech/ ME/ M.Tech ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಠ 28 ವರ್ಷ ವಯೋಮಿತಿಗಳನ್ನು ಮೀರಿರಬಾರದು
ವಯೋಮಿತಿ ಸಡಿಲಿಕೆ :
* ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 03 ವರ್ಷ
* SC / ST ಅಭ್ಯರ್ಥಿಗಳಿಗೆ 05 ವರ್ಷ


- ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ 

Pay Scale:

ಈ ಹುದ್ದೆಗಳಿಗೆ ಅನುಗುಣವಾಗಿ Rs.37,000/- ರೂ ಗಳ ವೆರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments