ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ

ಇನ್ ಸ್ಟಿಟ್ಯೂಟ್ ಆಫ್ ನ್ಯೂಕ್ಲಿಯರ್ ಮೆಡಿಸಿನ್ ಯಾಂಡ್ ಅಲೈಡ್ ಸೈನ್ಸ್ (ಐಎನ್ ಎಂಎಎಸ್) ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO)ದಲ್ಲಿ ಖಾಲಿ ಇರುವ 38 ಡಿಪ್ಲೊಮಾ ಅಪ್ರೆಂಟಿಸ್ ಹಾಗೂ ಗ್ರಾಜುವೇಟ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 22/2/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 38
ಡಿಪ್ಲೊಮಾ ಅಪ್ರೆಂಟಿಸ್ - 20
ಗ್ರಾಜುವೇಟ್ ಅಪ್ರೆಂಟಿಸ್ - 18
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಿ ಅರ್ಹತೆಯ ಆಧಾರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಡಿಪ್ಲೊಮಾ ಮತ್ತು BE ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 8,000/- ರೂಗಳವರೆಗೆ ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments