ಭಾರತೀಯ ರೈಲ್ವೆ ಇಲಾಖೆಯ ಈಸ್ಟ್ ಸೆಂಟ್ರಲ್ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ

ಭಾರತೀಯ ರೈಲ್ವೆ ಸಚಿವಾಲಯದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೂರ್ವ ಮಧ್ಯ ರೈಲ್ವೆ ವಿಭಾಗದಲ್ಲಿ ಪ್ರಸ್ತುತ ಖಾಲಿ ಇರುವ 1832 ದಾನ್ ಪುರ್ ಡಿವಿಷನ್, ಧನ್ ಬಾದ್ ಡಿವಿಷನ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ :09/12/2023.
ಹುದ್ದೆಗಳ ವಿವರ : 1832
ದಾನ್ ಪುರ್ ಡಿವಿಷನ್ - 675
ಧನ್ ಬಾದ್ ಡಿವಿಷನ್ - 156
ಪಂ.ದೀನದಯಾಳ್ ಉಪಾಧ್ಯಾಯ್ ಡಿವಿಷನ್ - 518
ಸೋನಾಪುರ್ ಡಿವಿಷನ್ - 47
ಸಮಸ್ತಿಪುರ ಡಿವಿಷನ್ - 81
ಪ್ಲಾಂಟ್ ಡಿಪೋ - ಪಂ.ದೀನದಯಾಳ್ ಉಪಾಧ್ಯಾಯ್ ಡಿವಿಷನ್ -135
ಕ್ಯಾರೇಜ್ ರಿಪೇರಿ ವರ್ಕ್ ಶಾಪ್/ ಹಾನರ್ಟ್ - 110
ಮೆಕ್ಯಾನಿಕಲ್ ವರ್ಕ್ ಶಾಪ್ / ಸಮಸ್ತಿಪುರ - 110
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ವಿದ್ಯಾರ್ಹತೆಯ ಮೆರಿಟ್ ಲಿಸ್ಟ್ ಆದರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು SSLC/ ITI ವಿದ್ಯಾರ್ಹತೆಯನ್ನು ಹೊಂದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ 100/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
- SC/ ST/ PWBD/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 15 ವರ್ಷಗಳನ್ನು ಪೂರೈಸಿರಬೇಕು ಹಾಗೂ ಗರಿಷ್ಠ 24 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
OBC ಅಭ್ಯರ್ಥಿಗಳಿಗೆ 3 ವರ್ಷ
SC ST ಅಭ್ಯರ್ಥಿಗಳಿಗೆ 5 ವರ್ಷ
PWD ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಿದೆ.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿ ಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments