ಭಾರತೀಯ ರೈಲ್ವೆ ಇಲಾಖೆ ವ್ಯಾಪ್ತಿಯ ಪೂರ್ವ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ 3115 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಭಾರತೀಯ ರೈಲ್ವೆ ಇಲಾಖೆ ವ್ಯಾಪ್ತಿಯ ಪೂರ್ವ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ 3115 ಫಿಟ್ಟರ್, ವೆಲ್ಡರ್, ಎಲೆಕ್ಟ್ರಿಕಲ್, ಮೆಕ್ಯಾನಿಸ್ಟ್, ಮತ್ತು ಎಲೆಕ್ಟ್ರಿಷಿಯನ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 26-10-2023 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 3115
HOWRAH DIVISION - 659
LILUAH WORKSHOP - 612
SEALDAH DIVISION - 440
KANCHRAPARA WORKSHOP - 187
MALDA DIVISION - 138
ASANSOL DIVISION - 412
JAMALPUR WORKSHOP - 667
ಅರ್ಜಿ ಸಲ್ಲಿಸಿದ ಎಲ್ಲಾ ಅರ್ಹ ಅಭ್ಯರ್ಥಿಗಳಿಗೆ ವಿದ್ಯಾರ್ಹತೆ ಆದಾರದ ಮೇರೆಗೆ ಮೆರಿಟ್ ಲಿಸ್ಟ್ ಮೂಲಕ ಆಯ್ಕೆ ಮಾಡಲಾಗುವುದು.
ಅಭ್ಯರ್ಥಿಗಳು SSLC/ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ 100/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. SC/ST ಮಾಜಿ ಸೈನಿಕರು / PWBD/ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 15 ವರ್ಷಗಳನ್ನು ಪೂರೈಸಿರಬೇಕು ಹಾಗೂ ಗರಿಷ್ಠ 24 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
OBC ಅಭ್ಯರ್ಥಿಗಳಿಗೆ 3 ವರ್ಷ
SC/ST ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿಯನ್ನು ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
-ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿ ಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments