ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 284 ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 284 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 12/09/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.ecil.co.in/ ಗೆ ಭೇಟಿ ನೀಡಿ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಅರ್ಜಿಯನ್ನು ಸಲ್ಲಿಸಬವುದು ಮತ್ತು ಅರ್ಜಿಯ ಪ್ರಿಂಟೌಟ್ ಅನ್ನು ಕಚೇರಿಗೆ ಸೆಪ್ಟೆಂಬರ್ 12,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಕಚೇರಿ ವಿಳಾಸ : ECIL Counter-Govt. ITI Musheerabad or ECIL Counter- Govt. QQS ITI-Girls Mehadipatnam, Telangana.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಐಟಿಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು. ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
* ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಕ್ಟೋಬರ್ 14,2022ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
* OBC ಅಭ್ಯರ್ಥಿಗಳಿಗೆ 28 ವರ್ಷಗಳು ಮತ್ತು SC/ST ಅಭ್ಯರ್ಥಿಗಳಿಗೆ ವರ್ಷಗಳ ಕಾಲ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 7,700/- ರಿಂದ 8,050/- ರೂ ವರೆಗೆ ವೇತನವನ್ನು ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.





Comments