ಎಲೆಕ್ಟ್ರಾನಿಕ್ಸ್ ಕಾರ್ಪೊರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

ದೇಶದ ಪರಮಾಣು ಶಕ್ತಿ ಸಂಶೋಧನಾ ಸಂಸ್ಥೆಗಳೊಂದಿಗೆ ಸಹಭಾಗಿತ್ವ ಹೊಂದಿರುವ ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 1625 ವಿವಿಧ ಹುದ್ದೆಗಳಿಗೆ ಭಾರತದಾದ್ಯಂತ ಇರುವ ಸಂಸ್ಥೆಯ ಯಾವುದೇ ಕಚೇರಿಯಲ್ಲಿ 1ವರ್ಷದ ಅವಧಿಗೆ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 11/04/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಒಟ್ಟು ಹುದ್ದೆಗಳ ವಿವರ: 1625
* ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ - 814
* ಎಲೆಕ್ಟ್ರಿಷಿಯನ್ - 184
* ಫಿಟ್ಟರ್ - 627
- On-line registration 01/04/2022 (14.00 hrs.)
- Last date for on-line registration 11/04/2022 (14.00 hrs.)
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಟ್ರೇಡ್ ಮತ್ತು ಮೀಸಲಾತಿ ಅನ್ವಯ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡುವ ಮೂಲಕ ಆಯ್ಕೆ ಮಾಡಲಾಗುತ್ತದೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್/ ಎಲೆಕ್ಟ್ರಿಷಿಯನ್/ ಫಿಟ್ಟರ್ ಟ್ರೇಡ್ ಗಳಲ್ಲಿ ITI ಉತ್ತೀರ್ಣರಾಗಿರಬೇಕು. ಕಾರ್ಮಿಕ ಹಾಗೂ ಉದ್ಯೋಗ ನಿರ್ದೇಶನಾಲಯದಲ್ಲಿ ತರಬೇತಿ ಪಡೆದವರಿಗೂ ಆದ್ಯತೆ ಇದೆ.
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 31/03/2022 ದಿನಾಂಕಕ್ಕೆ ಅನ್ವಯವಾಗುವಂತೆ 30 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
* SC/ST ಅಭ್ಯರ್ಥಿಗಳಿಗೆ 5ವರ್ಷ, ಇತರ 3 ಹಾಗೂ ಅಂಗವಿಕಲರಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 20,480/- ರಿಂದ 24,708/- ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments