ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ECIL) ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ECIL) ನಲ್ಲಿ ಖಾಲಿ ಇರುವ 163 ಪ್ರಾಜೆಕ್ಟ್ ಎಂಜಿನಿಯರ್ ಮತ್ತು ಟೆಕ್ನಿಕಲ್ ಆಫೀಸರ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ01/09/2023 ರಿಂದ 04/09/2023 ವರೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
ದೇಶಾದ್ಯಂತ ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತಿದ್ದು ಚೆನೈ, ಮುಂಬೈ, ನವದೆಹಲಿ, ಕಲ್ಕತ್ತ, ಹೈದರಾಬಾದ್, ವೈಜಾಗ್ ಮತ್ತು ಬೆಂಗಳೂರಿನಲ್ಲಿ ಸಂದರ್ಶನ ನಡೆಯಲಿದೆ.
ಹುದ್ದೆಗಳ ವಿವರ : 163
ಪ್ರಾಜೆಕ್ಟ್ ಎಂಜಿನಿಯರ್ - 64
ಟೆಕ್ನಿಕಲ್ ಆಫೀಸರ್ - 67
ಅಸಿಸ್ಟಂಟ್ ಪ್ರಾಜೆಕ್ಟ್ ಎಂಜಿನಿಯರ್ - 32
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು Diploma/ B.Tech./ B.E ವಿದ್ಯಾರ್ಹತೆಯನ್ನು ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 25 ವರ್ಷ್ ಹಾಗೂ ಗರಿಷ್ಠ 33 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳು ಹಾಗೂ
- PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 24,000/- ರಿಂದ 55,000/- ರೂಗಳ ವರೆಗೆ ವೇತನವನ್ನು ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.





Comments