ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ECIL) ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಸಾರ್ವಜನಿಕ ಇಲಾಖೆಗೆ ಒಳಪಟ್ಟಿರುವ ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ECIL) ನಲ್ಲಿ ಖಾಲಿ ಇರುವ 437 ಎಲೆಕ್ಟ್ರಿಷನ್, ಫೈಟರ್, ಮೆಕ್ಯಾನಿಕ್, ಮಷಿನಿಸ್ಟ್, COPA, ವೆಲ್ಡರ್, ಪಂಟರ್ ಮತ್ತು ಟರ್ನರ್ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ಸಂದರ್ಶನ ಮತ್ತು ದಾಖಲೆಗಳ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವದು.
ಹುದ್ದೆಗಳ ವಿವರ : 437
Electronics Mechanic (EM) : 162
Electrician : 70
Fitter : 70
Mechanic (R&AC) : 17
Turner : 17
Machinist : 17
Machinist (Grinder) : 13
COPA : 45
Welder : 22
Painter : 4
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ITI, ಪದವಿ ವಿದ್ಯಾರ್ಹತೆಯನ್ನು ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಹಾಗೂ ಗರಿಷ್ಠ 25 ವರ್ಷ ವಯೋಮಿತಿಯನ್ನು ಮೀರಿರಬಾರದು.
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 28 ವರ್ಷ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 30 ವರ್ಷ
- PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.





Comments