ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ECIL) ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಸಾರ್ವಜನಿಕ ಇಲಾಖೆಗೆ ಒಳಪಟ್ಟಿರುವ ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ECIL) ನಲ್ಲಿ ಖಾಲಿ ಇರುವ17 ಪ್ರಾಜೆಕ್ಟ್ ಇಂಜಿನಿಯರ್, ಟೆಕ್ನಿಕಲ್ ಆಫೀಸರ್ ಮತ್ತು ಅಸಿಸ್ಟೆಂಟ್ ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಮಾಡಿಕೊಳ್ಳಲಾಗುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸಂದರ್ಶನ ಮತ್ತು ದಾಖಲೆಗಳ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವದು.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 17/10/2024 ಬೆಳಗ್ಗೆ 09:00 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ :
ECIL Zonal Office, Economist House, Post-Box No. 3148, S-15,
Industrial Estate, Guindy, Chennai – 600032
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಈ ಕೆಳಗಿನಂತೆ ಮಾಸಿಕ ವೇತನವನ್ನು ನೀಡಲಾಗುತ್ತದೆ.
- Project Engineer : 1ನೇ ವರ್ಷ 40,000/-, 2ನೇ ವರ್ಷ ₹ 45,000/- 3ನೇ ವರ್ಷ ₹ 50,000/- & 4ನೇ ವರ್ಷ ₹ 55,000/-
- Technical Officer : 1ನೇ ವರ್ಷ 25,000/-, 2ನೇ ವರ್ಷ ₹ 28,000/- 3 ಮತ್ತು 4ನೇ ವರ್ಷ ₹ 31,000/-
- Assistant Project Engineer : 1ನೇ ವರ್ಷ 24,500/-, 2ನೇ ವರ್ಷ ₹ 26,950/- 3 ಮತ್ತು 4ನೇ ವರ್ಷ ₹ 30,000/-
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.




Comments