Loading..!

ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ECIL) ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: Degree
Published by: Bhagya R K | Date:2 ನವೆಂಬರ್ 2024
not found

ಸಾರ್ವಜನಿಕ ಇಲಾಖೆಗೆ ಒಳಪಟ್ಟಿರುವ ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ECIL) ನಲ್ಲಿ ಖಾಲಿ ಇರುವ 61 ಪ್ರಾಜೆಕ್ಟ್ ಇಂಜಿನಿಯರ್, ಟೆಕ್ನಿಕಲ್ ಆಫೀಸರ್ ಮತ್ತು ಅಸಿಸ್ಟೆಂಟ್ ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಮಾಡಿಕೊಳ್ಳಲಾಗುತ್ತದೆ.   

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  61
Application Start Date:  2 ನವೆಂಬರ್ 2024
Application End Date:  11 ನವೆಂಬರ್ 2024
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸಂದರ್ಶನ ಮತ್ತು ದಾಖಲೆಗಳ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವದು.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 04, 05, 07, 11-ನವೆಂಬರ್-2024 ರೊಳಗಾಗಿ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ. 

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ B.Tech/ BE/ Diploma ಪದವಿ ವಿದ್ಯಾರ್ಹತೆಯನ್ನು ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಹಾಗೂ ಗರಿಷ್ಠ 33 ವರ್ಷ ವಯೋಮಿತಿಯನ್ನು ಮೀರಿರಬಾರದು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Degree

Comments