ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

ನವರತ್ನ ಸಂಸ್ಥೆಗಳಲ್ಲಿ ಒಂದಾಗಿರುವ ಇಂಜಿನಿಯರಿಂಗ್ ಕನ್ಸಲ್ಟೆನ್ಸಿ ಸಂಸ್ಥೆಯಾಗಿರುವ ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 60 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 18/04/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಒಟ್ಟು ಹುದ್ದೆಗಳ ವಿವರ: 60
* ಜೂನಿಯರ್ ಡ್ರಾಪ್ಟ್ಸ್ ಮನ್ (ಗ್ರೇಡ್-II) - 27
* ಜೂನಿಯರ್ ಡ್ರಾಪ್ಟ್ಸ್ ಮನ್ (ಗ್ರೇಡ್-I) - 33
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ವಿವಿಧ ವಿಭಾಗಗಳಲ್ಲಿ Diploma ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ಮತ್ತು ವೃತ್ತಿಯಲ್ಲಿ ಅನುಭವ ಹೊಂದಿರುವವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು 28/02/2022 ಕ್ಕೆ ಅನ್ವಯವಾಗುವಂತೆ ಗರಿಷ್ಠ 30 ವರ್ಷ ವಯೋಮಿತಿ ನಿಗದಿಪಡಿಸಲಾಗಿದ್ದು, ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇದೆ.
- ಜೂನಿಯರ್ ಡ್ರಾಪ್ಟ್ಸ್ ಮನ್ (ಗ್ರೇಡ್-I) - 25000-100000/-
- ಜೂನಿಯರ್ ಡ್ರಾಪ್ಟ್ಸ್ ಮನ್ (ಗ್ರೇಡ್-I) - 26500-115000/-ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments