ಕಲಬುರಗಿಯ ನೌಕರರ ರಾಜ್ಯ ವಿಮಾ ನಿಗಮ(ESIC)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ
Published by: Mallappa Myageri | Date:24 ನವೆಂಬರ್ 2021

ಕಾರ್ಮಿಕರ ರಾಜ್ಯ ವಿಮಾ ನಿಗಮದಲ್ಲಿ ಖಾಲಿ ಇರುವ ಸಹ ಪ್ರಾಧ್ಯಾಪಕ ಹುದ್ದೆಗಳು-8, ಸಹಾಯಕ ಪ್ರಾಧ್ಯಾಪಕ ಹುದ್ದೆಗಳು- 23 ಒಟ್ಟು 31 ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಸಲಾಗುತ್ತಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ : 03-12-2021 ರಂದು ಬೆಳಿಗ್ಗೆ 11:00 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಲು ಸೂಚಿಸಿದೆ.
No. of posts: 31
Application Start Date: 24 ನವೆಂಬರ್ 2021
Application End Date: 3 ಡಿಸೆಂಬರ್ 2021
Work Location: Karnataka
Selection Procedure:
ಸಹಪ್ರಾಧ್ಯಾಪಕ ಮತ್ತು ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.
Qualification: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ಕೇಳಲಾಗಿರುವ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರತಕ್ಕದ್ದು.
Age Limit: ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ರಿಂದ ಗರಿಷ್ಟ 69 ವರ್ಷ ವಯೋಮಿತಿಯೊಳಗೆ ಇರತಕ್ಕದ್ದು.
Pay Scale:
ನೌಕರರ ರಾಜ್ಯ ವಿಮಾ ನಿಗಮ (ESIC) ದಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ಈ ಕೆಳಗಿನಂತೆ ವೇತನವನ್ನು ಪಡೆಯುವರು.
1) ಸಹಪ್ರಾಧ್ಯಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಪ್ರತಿ ತಿಂಗಳಿಗೆ 92,000/-ರೂಗಳ ವೇತನವನ್ನು ಪಡೆಯುವರು.
2) ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಪ್ರತಿ ತಿಂಗಳಿಗೆ 1,06,000/-ರೂಗಳ ವೇತನವನ್ನು ಪಡೆಯುವರು.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments