ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ(EPFO)ಯಲ್ಲಿ ಖಾಲಿ ಇರುವ 2859 ಹುದ್ದೆಗಳ ಭರ್ಜರಿ ನೇಮಾಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ(EPFO) ಯಲ್ಲಿ ಖಾಲಿ ಇರುವ2859 ಸಾಮಾಜಿಕ ಭದ್ರತಾ ಸಹಾಯಕ ಮತ್ತು ಸ್ಟೆನೋಗ್ರಾಫರ್ ಹುದ್ದೆಗಳ ಭರ್ಜರಿ ನೇಮಾಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, 26 ಏಪ್ರಿಲ್ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 2859
ಸಾಮಾಜಿಕ ಭದ್ರತಾ ಸಹಾಯಕ : 2674
ಸ್ಟೆನೋಗ್ರಾಫರ್ : 185
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ PUC ಹಾಗೂ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 700 /- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
SC/ST/PwBD/ಮಹಿಳಾ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಇರಲಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಹಾಗೂ ಗರಿಷ್ಠ 27 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
ವಯೋಮಿತಿಯಲ್ಲಿ ಸಡಿಲಿಕೆ :
SC/ST ಅಭ್ಯರ್ಥಿಗಳಿಗೆ 5 ವರ್ಷ
OBC ಅಭ್ಯರ್ಥಿಗಳಿಗೆ 3 ವರ್ಷ
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 29,200/-ರೂ ಗಳಿಂದ 92,300/-ರೂಗಳ ವರೆಗೆ ಮಾಸಿಕ ವೇತನ ನೀಡಲಾಗುವದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments