ರಾಜ್ಯ ನೌಕರರ ವಿಮಾ ನಿಗಮ (ESIC)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ರಾಜ್ಯ ನೌಕರರ ವಿಮಾ ನಿಗಮ (ESIC)ದಲ್ಲಿ ಖಾಲಿ ಇರುವ 55 ಸ್ಪೆಷಲಿಸ್ಟ್ ಗ್ರೇಡ್ II ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 20/04/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿಯನ್ನು ಹಾಕಬಹುದು. ಭಾರತದಾದ್ಯಂತ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಭಾಷಾ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪೋಸ್ಟ್ ಗ್ರಾಜುಯೇಶನ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
- ವೃತ್ತಿಯಲ್ಲಿ ಅನುಭವ ಹೊಂದಿರುವವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ/ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿಯನ್ನು ನೀಡಲಾಗಿರುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 20/04/2022 ರ ಅನ್ವಯ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.67,700/- ರಿಂದ 78,800/-ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments