ರಾಜ್ಯ ನೌಕರರ ವಿಮಾ ನಿಗಮ (ESIC)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ

ರಾಜ್ಯ ನೌಕರರ ವಿಮಾ ನಿಗಮ(ESIC) ಕಲಬುರಗಿಯ ವೈದ್ಯಕೀಯ ಕಾಲೇಜುಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರು ಮತ್ತು ಸಹ ಪ್ರಾಧ್ಯಾಪಕರು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ಒಂದು ವರ್ಷದ ಅವಧಿಯವರೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 29/04/2022 ರಂದು ಬೆಳಗ್ಗೆ 9 ರಿಂದ 10:30ರ ಒಳಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಪಾಲ್ಗೊಳ್ಳಬಹುದು.
ಹುದ್ದೆಗಳ ವಿವರ: 23
* Associate professor - 09
* Assistant professor - 14
ಅರ್ಜಿ ಸಲ್ಲಿಸುವ ವಿಳಾಸ:
ESIC Medical College and Hospital,
Kalaburgi-585 106
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ MBBS ಮತ್ತು ಪೋಸ್ಟ್ ಗ್ರಾಜುಯೇಶನ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
- ವೃತ್ತಿಯಲ್ಲಿ ಅನುಭವ ಹೊಂದಿರುವವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಗರಿಷ್ಠ 69 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
* Associate professor - ರೂ. 1,06,000/-
* Assistant professor - ರೂ. 92,000/-ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.






Comments