ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC) ದಲ್ಲಿ ಖಾಲಿ ಇರುವ 13 ಅನೆಸ್ತೇಷಿಯಾ ಮತ್ತು ಕ್ರಿಟಿಕಲ್ ಕೇರ್, ರೇಡಿಯಾಲಜಿ, ಬಯೋಕೆಮಿಸ್ಟ್ರಿ ಮತ್ತು ಡರ್ಮಟಾಲಜಿ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 16 ಮೇ 2024 ರಂದು ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಹುದ್ದೆಗಳ ವಿವರ : 13
ಸೀನಿಯರ್ ರೆಸಿಡೆಂಟ್(ಅನೆಸ್ತೇಷಿಯಾ ಮತ್ತು ಕ್ರಿಟಿಕಲ್ ಕೇರ್): 01
ಸೀನಿಯರ್ ರೆಸಿಡೆಂಟ್ (ಅಪಘಾತ): 01
ಸೀನಿಯರ್ ರೆಸಿಡೆಂಟ್(ಎದೆ): 02
ಸೀನಿಯರ್ ರೆಸಿಡೆಂಟ್ (ಡರ್ಮಟಾಲಜಿ): 02
ಸೀನಿಯರ್ ರೆಸಿಡೆಂಟ್ (ENT): 01
ಸೀನಿಯರ್ ರೆಸಿಡೆಂಟ್ (ಗೈನೆ): 02
ಸೀನಿಯರ್ ರೆಸಿಡೆಂಟ್ (ಪಾಹಾಲಜಿ): 02
ಸೀನಿಯರ್ ರೆಸಿಡೆಂಟ್ (ರೇಡಿಯಾಲಜಿ): 01
ಸೀನಿಯರ್ ರೆಸಿಡೆಂಟ್ (ಬಯೋಕೆಮಿಸ್ಟ್ರಿ): 01
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು MBBS/ MD/ MS/ DNB ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಶುಲ್ಕವನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
* ಸಾಮಾನ್ಯ ಅಭ್ಯರ್ಥಿಗಳಿಗೆ ಮತ್ತು ಹಿಂದುಳಿದ ವರ್ಗದ (2A/2B/3A/3B) ಅಭ್ಯರ್ಥಿಗಳಿಗೆ ರೂ 300/-
* ಮಾಜಿ ಸೈನಿಕ ಅಭ್ಯರ್ಥಿಗಳಿಗೆ SC/ST/CAT-1 ಅಭ್ಯರ್ಥಿಗಳಿಗೆ 75/- ರೂ ಅರ್ಜಿ ಶುಲ್ಕ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಗರಿಷ್ಠ 45 ವರ್ಷ ವಯೋಮಿತಿಯನ್ನು ಮೀರಿರಬಾರದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments