ಎಕ್ಸ್‌ಪೋರ್ಟ್ ಇಂಪೋರ್ಟ್(EXIM) ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಎಕ್ಸ್‌ಪೋರ್ಟ್ ಇಂಪೋರ್ಟ್ ಬ್ಯಾಂಕ್ ಆಫ್ ಇಂಡಿಯಾ (EXIM)ನಲ್ಲಿ ಖಾಲಿ ಇರುವ ಒಟ್ಟು 30 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು. ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿ ಕೊಳ್ಳಲಾಗುತ್ತದೆ. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು. ಕಾರ್ಯ ಕ್ಷಮತೆಯನ್ನು ಆಧರಿಸಿ ಗುತ್ತಿಗೆ ಅವಧಿಯನ್ನು ವಿಸ್ತರಣೆ ಮಾಡಲಾಗುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 28 ಏಪ್ರಿಲ್ 2022ರೊಳಗೆ ಅರ್ಜಿ ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : 08/04/2022
- ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 28/04/2022
- ಸಾಮಾನ್ಯ ವರ್ಗ, ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ ₹600/-
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಹಿಳಾ ಅಭ್ಯರ್ಥಿಗಳಿಗೆ ₹100/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಅರ್ಜಿಯನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಂದರ 28/04/2022 ಪುರುಷ, ಮಹಿಳಾ ಮತ್ತು ತೃತೀಯ ಲಿಂಗದ ಅಭ್ಯರ್ಥಿಗೆ ಕನಿಷ್ಟ 21 ವರ್ಷ ವಯಸ್ಸಾಗಿರಬೇಕು. ಹಾಗೂ 40 ವರ್ಷ ವಯಸ್ಸು ಮೀರಿರಬಾರದು.
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments