ಎಕ್ಸ್‌ಪೋರ್ಟ್ ಇಂಪೋರ್ಟ್ ಬ್ಯಾಂಕ್ ಆಫ್ ಇಂಡಿಯಾ (EXIM) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:12 ಅಕ್ಟೋಬರ್ 2023

ಎಕ್ಸ್‌ಪೋರ್ಟ್ ಇಂಪೋರ್ಟ್ ಬ್ಯಾಂಕ್ ಆಫ್ ಇಂಡಿಯಾ (EXIM)ನಲ್ಲಿ ಖಾಲಿ ಇರುವ ಮ್ಯಾನೇಜ್ ಮೆಂಟ್ ಟ್ರೇನಿ ಹುದ್ದೆಗಳನ್ನು ಒಂದು ವರ್ಷದ ಅವಧಿಯವರೆಗೆ ಟ್ರೇನಿಗಳಾಗಿ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದ್ದು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ21/10/2023 ರಿಂದ ಪ್ರಾರಂಭಗೊಂಡು ದಿನಾಂಕ 10/11/2023 ರಂದು ಅರ್ಜಿ ಸಲ್ಲಿಸುವ ಪ್ರಕ್ರಿಯೆ ಮುಕ್ತಾಯ ಗೊಳ್ಳುತ್ತದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.
No. of posts: 45
Application Start Date: 21 ಅಕ್ಟೋಬರ್ 2023
Application End Date: 10 ನವೆಂಬರ್ 2023
Work Location: ಭಾರತದಾದ್ಯಂತ
Selection Procedure: ಈ ಹುದ್ದೆಗಳಿಗೆ ಅರ್ಜಿ ಅಲ್ಲಿಸಿರುವ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಿ ನಂತರ ಸಂದರ್ಶನ ನಡೆಸುವದರ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು MBA/ CA/ PGDBA/ CGPA/ BE/ B.Tech/ MCA/ M.Tech/ CS/ BCA/ ಪದವಿ/ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಕನಿಷ್ಠ ಶೇ 50 ರಿಂದ 60 ರ ವರೆಗೆ ಅಂಕಗಳೊಂದಿಗೆ ಪಾಸಾಗಿರಬೇಕು ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅನ್ವಯವಾಗುವಂತೆ ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 21 ವರ್ಷ ವಯಸ್ಸು ಹಾಗೂ ಗರಿಷ್ಠ ವಯೋಮಿತಿಯನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
ಸಾಮಾನ್ಯ ಅಭ್ಯರ್ಥಿಗಳಿಗೆ : 25 ವರ್ಷ
OBC ಅಭ್ಯರ್ಥಿಗಳಿಗೆ : 28 ವರ್ಷ
SC/ST ಅಭ್ಯಥಿಗಳಿಗೆ : 30 ವರ್ಷ ಹಾಗೂ
PwBD ಅಭ್ಯರ್ಥಿಗಳಿಗೆ : 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
Pay Scale: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗುವಂತೆ 36000 - 63840/- ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Job Location: ಭಾರತದಾದ್ಯಂತ, KA,
To Download Official Notification
Related Tags: Degree Engineering





Comments