ಎಕ್ಸ್‌ಪೋರ್ಟ್ ಇಂಪೋರ್ಟ್ ಬ್ಯಾಂಕ್ ಆಫ್ ಇಂಡಿಯಾ (EXIM) ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಎಕ್ಸ್‌ಪೋರ್ಟ್ ಇಂಪೋರ್ಟ್ ಬ್ಯಾಂಕ್ ಆಫ್ ಇಂಡಿಯಾ (EXIM)ನಲ್ಲಿ ಖಾಲಿ ಇರುವ ಒಸಿ ಕಂಪ್ಲೈನ್ಸ್, ಒಸಿ ಎನ್ವಿರಾನ್ಮೆಂಟ್ ಸೋಷಿಯಲ್ ಅಂಡ್ ಗವರ್ನನ್ಸ್ ಹುದ್ದೆಗಳನ್ನು ಒಳಗೊಂಡಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 27/01/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 30
ಒಸಿ ಕಂಪ್ಲೈನ್ಸ್ - 2
ಒಸಿ ಎನ್ವಿರಾನ್ಮೆಂಟ್ ಸೋಷಿಯಲ್ ಅಂಡ್ ಗವರ್ನನ್ಸ್ - 1
ಇಂಫಾರ್ಮೇಶನ್ ಟೆಕ್ನಲಾಜಿ 6
ಕಾರ್ಪೊರೇಟ್ ಕಮ್ಯೂನಿಕಷನ್ - 1
ಜಿಆರ್ ಐಡಿ / ಎಂಎಸ್ - 1
ಅಡ್ಮಿನಿಸ್ಟ್ರೇಷನ್ - 1
ಹ್ಯೂಮನ್ ರಿಸೋರ್ಸ್ - 2
ರಿಸರ್ಚ್ ಯಾಂಡ್ ಅನಾಲಿಸಿಸ್ ಆಫೀಸರ್ - 2
ಲೋನ್ ಆಪರೇಷನ್ ಯಾಂಡ್ ಲೋನ್ ಮಾನಿಟರಿಂಗ್ - 4
ಲೀಗಲ್ - 3
ಸ್ಪೆಷಲ್ ಸಿಚುವೇಷನ್ ಗ್ರೂಪ್ - 6
ರಿಸ್ಕ್ ಮ್ಯಾನೇಜ್ಮೆಂಟ್ ಗ್ರೂಪ್ - 1
ಈ ಹುದ್ದೆಗಳಿಗೆ ಅರ್ಜಿ ಅಲ್ಲಿಸಿರುವ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಿ ನಂತರ ಸಂದರ್ಶನ ನಡೆಸುವದರ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು MBA/ CA/ PGDBA/ CGPA/ BE/ B.Tech/ MCA/ M.Tech/ CS/ BCA/ ಪದವಿ/ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಕನಿಷ್ಠ ಶೇ 50 ರಿಂದ 60 ರ ವರೆಗೆ ಅಂಕಗಳೊಂದಿಗೆ ಪಾಸಾಗಿರಬೇಕು ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 600 /- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.
SC / ST ಮತ್ತು ಮಹಿಳಾ ಅಭ್ಯರ್ಥಿಗಳು 100 /- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 27/01/2023 ಕ್ಕೆ ಅನ್ವಯವಾಗುವಂತೆ ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 27 ವರ್ಷ ವಯಸ್ಸು ಹಾಗೂ ಗರಿಷ್ಠ 60 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗುವಂತೆ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
ಅಧಿಕೃತ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ





Comments