ಎಕ್ಸ್‌ಪೋರ್ಟ್ ಇಂಪೋರ್ಟ್ ಬ್ಯಾಂಕ್ ಆಫ್ ಇಂಡಿಯಾ (EXIM) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಎಕ್ಸ್‌ಪೋರ್ಟ್ ಇಂಪೋರ್ಟ್ ಬ್ಯಾಂಕ್ ಆಫ್ ಇಂಡಿಯಾ (EXIM)ನಲ್ಲಿ ಖಾಲಿ ಇರುವ 50 ಮ್ಯಾನೇಜ್ ಮೆಂಟ್ ಟ್ರೇನಿ ಹುದ್ದೆಗಳನ್ನು ಒಂದು ವರ್ಷದ ಅವಧಿಯವರೆಗೆ ಟ್ರೇನಿಗಳಾಗಿ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದ್ದು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ 18/09/2024 ರಿಂದ ಪ್ರಾರಂಭಗೊಂಡು ದಿನಾಂಕ 07/10/2024 ರಂದು ಅರ್ಜಿ ಸಲ್ಲಿಸುವ ಪ್ರಕ್ರಿಯೆ ಮುಕ್ತಾಯ ಗೊಳ್ಳುತ್ತದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅನ್ವಯವಾಗುವಂತೆ ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 21 ವರ್ಷ ವಯಸ್ಸು ಹಾಗೂ ಗರಿಷ್ಠ ವಯೋಮಿತಿಯನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
ಸಾಮಾನ್ಯ ಅಭ್ಯರ್ಥಿಗಳಿಗೆ : 28 ವರ್ಷ
OBC ಅಭ್ಯರ್ಥಿಗಳಿಗೆ : 31 ವರ್ಷ
SC/ST ಅಭ್ಯಥಿಗಳಿಗೆ : 33 ವರ್ಷ ಹಾಗೂ
PwBD ಅಭ್ಯರ್ಥಿಗಳಿಗೆ : 43 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗುವಂತೆ 65,000/- ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments