ಫರ್ಟಿಲೈಸರ್ಸ್ ಮತ್ತು ಕೆಮಿಕಲ್ಸ್ ಟ್ರಾವಂಕೂರ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ

ಫರ್ಟಿಲೈಸರ್ಸ್ ಮತ್ತು ಕೆಮಿಕಲ್ಸ್ ಟ್ರಾವಂಕೂರ್ ಲಿಮಿಟೆಡ್ (FACT)ನಲ್ಲಿ ಖಾಲಿ ಇರುವ 74 ಸೀನಿಯರ್ ಮ್ಯಾನೇಜರ್, ಮ್ಯಾನೇಜ್ ಮೆಂಟ್ ಟ್ರೇನಿ(ಕೆಮಿಕಲ್, ಇಲೆಕ್ಟ್ರಿಕಲ್, ಇನ್ ಸ್ಟ್ರುಮೆಂಟೇಷನ್, ಮಾರ್ಕೆಟಿಂಗ್, ಫೈನಾನ್ಸ್) ಹಾಗೂ ಟೆಕ್ನಿಷಿಯನ್ ಹುದ್ದೆಗಳನ್ನೊಳಗೊಂಡಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 16-ಮೇ-2023 ರೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಯಿಸಿರುವ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಅನುಗುಣವಾಗುವಂತೆ ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು SSLC/ B.Sc/ CA/ CMA / ICWAI/ ಡಿಪ್ಲೋಮಾ/ ಇಂಜಿನಿಯರಿಂಗ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
- ಟೆಕ್ನಿಷಿಯನ್, ಕ್ರಾಫ್ಟ್ಸ್ ಮೆನ್ ಸ್ಯಾನಿಟರಿ ಇನ್ಸ್‌ಪೆಕ್ಟರ್, ರಿಗ್ಗರ್ ಸಹಾಯಕ ಹುದ್ದೆಗಳಿಗೆ: ರೂ.590/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
- ಸೀನಿಯರ್ ಮ್ಯಾನೇಜರ್, ಮ್ಯಾನೇಜ್‌ಮೆಂಟ್ ಟ್ರೈನಿ ಮತ್ತು ಆಫೀಸರ್ ಹುದ್ದೆಗಳಿಗೆ: ರೂ.1180/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
SC/ST/PwBD/ESM ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಇರಲಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 26 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 45 ವರ್ಷ ವಯೋಮಿತಿಯನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ : 03 ವರ್ಷಗಳು
SC/ST ಅಭ್ಯರ್ಥಿಗಳಿಗೆ: 05 ವರ್ಷಗಳು
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಗಳಿಗೆ ಮಾಸಿಕ 19,500- ರೂ ಗಳಿಂದ 2,00,000/- ರೂಗಳ ವರೆಗೆ ವೇತನ ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments