ಭಾರತೀಯ ಆಹಾರ ಇಲಾಖೆಯಲ್ಲಿ ಖಾಲಿ ಇರುವ 5000 ಕ್ಕೂ ಅಧಿಕ ಹುದ್ದೆಗಳ ಭರ್ಜರಿ ನೇಮಕಾತಿ

ಭಾರತೀಯ ಆಹಾರ ನಿಗಮದಲ್ಲಿ ಖಾಲಿ ಇರುವ 5043 ಅಸಿಸ್ಟೆಂಟ್ ಗ್ರೇಡ್, ಜೂನಿಯರ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 05/10/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತದಾಧ್ಯಂಥ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ:
* ಜೂನಿಯರ್ ಇಂಜಿನಿಯರ್ - 63
* ಸ್ಟೆನೋ ಗ್ರೇಡ್ II - 4980
ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 06/09/2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮತ್ತು ಶುಲ್ಕ ಪಾವತಿಗೆ ಕೊನೆಯ ದಿನಾಂಕ: 05/10/2022
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ (ಹಂತ-I, II), ಕೌಶಲ್ಯ ಪರೀಕ್ಷೆ, ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಡಿಪ್ಲೊಮಾ, ಇಂಜಿನಿಯರಿಂಗ್, ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಇತರ ಅಭ್ಯರ್ಥಿಗಳು: ರೂ.500/- ಅರ್ಜಿ ಶುಲ್ಕವನ್ನು ಪಾವತಿಸಬೇಕು.
* SC/ST/PwBD/ಸೇವೆಯ ರಕ್ಷಣಾ ಸಿಬ್ಬಂದಿ/ಮಾಜಿ ಸೈನಿಕರು ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಕನಿಷ್ಠ 25ರಿಂದ 28 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
OBC ಅಭ್ಯರ್ಥಿಗಳಿಗೆ 03 ವರ್ಷಗಳು
SC/ST ಅಭ್ಯರ್ಥಿಗಳಿಗೆ 05 ವರ್ಷಗಳು
PwBD (ಸಾಮಾನ್ಯ) ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ರೂ.28200-103400/- ವೇತನ ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.




Comments