ಗದಗ ಜಿಲ್ಲಾ ಪಂಚಾಯತ್ ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಕ್ಕೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಗದಗ ಜಿಲ್ಲಾ ಪಂಚಾಯತ್ ದಲ್ಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಗದಗ ಜಿಲ್ಲೆಗೆ ತಾಂತ್ರಿಕ ಸಹಾಯಕರು ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಕೊನೆಯ ದಿನಾಂಕ 17-10-2021 ರೊಳಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಿವಿಲ್ ವಿಷಯದಲ್ಲಿ ಬಿ.ಇ / ಬಿ.ಟೆಕ್ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ಜೊತೆಗೆಕನಿಷ್ಟ 3 ವರ್ಷಗಳ ಸಂಬಂಧಿತ ಅನುಭವ ಹೊಂದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 45 ವರ್ಷ ವಯೋಮಿತಿಯೊಳಗಿರಬೇಕು.ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments