ಗದಗ ಜಿಲ್ಲಾ ಪಂಚಾಯಿತಿ ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ l ನಾಳೆಯೇ ಕೊನೆದಿನ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:26 ಡಿಸೆಂಬರ್ 2022

ಗದಗ ಜಿಲ್ಲಾ ಪಂಚಾಯತನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಖಾಲಿ ಇರುವ 17 ತಾಂತ್ರಿಕ ಸಹಾಯಕರು ಹುದ್ದೆಗಳ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 27/12/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 17
- ತಾಂತ್ರಿಕ ಸಹಾಯರು (ಕೃಷಿ) : 6
- ತಾಂತ್ರಿಕ ಸಹಾಯಕರು (ತೋಟಗಾರಿಕೆ) : 5
- ತಾಂತ್ರಿಕ ಸಹಾಯಕರು (ಅರಣ್ಯ) : 5
- ತಾಂತ್ರಿಕ ಸಹಾಯಕರು (ರೇಷ್ಮೆ) : 1
No. of posts: 17
Application Start Date: 20 ಡಿಸೆಂಬರ್ 2022
Application End Date: 27 ಡಿಸೆಂಬರ್ 2022
Work Location: ಗದಗ ಜಿಲ್ಲಾ
Qualification: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು BSc/ MSc ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು. ಅಭ್ಯರ್ಥಿಗಳು ಕನಿಷ್ಠ 36 ತಿಂಗಳುಗಳ ವೃತ್ತಿ ಅನುಭವವನ್ನು ಹೊಂದಿರಬೇಕು.
Age Limit: ಗದಗ ಜಿಲ್ಲಾ ಪಂಚಾಯತಿಯ ತಾಂತ್ರಿಕ ಸಹಾಯಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 24,000/- ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ. ಜೊತೆಗೆ ಪ್ರಯಾಣ ಭತ್ಯೆಯನ್ನು ಗರಿಷ್ಠ 2000/- ರೂಗಳ ವರೆಗೆ ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments