ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಮಹಾರತ್ನ ಕಂಪನಿಗಳಲ್ಲಿ ಒಂದಾಗಿರುವ ಭಾರತ ಸರ್ಕಾರದ ಅಧೀನದಲ್ಲಿರುವ ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (GAIL) ನಲ್ಲಿ ಖಾಲಿ ಇರುವ 261 ಸೀನಿಯರ್ ಇಂಜಿನಿಯರ್, ಸೀನಿಯರ್ ಆಫೀಸರ್ ಮತ್ತು ಆಫೀಸರ್ ಹುದ್ದೆಗಳು ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳನ್ನು ಗುಂಪು ಚರ್ಚೆ/ಪ್ರಾವೀಣ್ಯತೆ ಪರೀಕ್ಷೆ/ದೈಹಿಕ ಫಿಟ್‌ನೆಸ್ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪ್ರಾರಂಭ ದಿನಾಂಕ 12 ನವೆಂಬರ್ 2024 ಹಾಗೂ ಕೊನೆಯ ದಿನಾಂಕ 11 ಡಿಸೆಂಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 261
ಸೀನಿಯರ್ ಇಂಜಿನಿಯರ್ - 98
ಸೀನಿಯರ್ ಆಫೀಸರ್ - 130
ಆಫೀಸರ್ - 33
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು B.Com/B.A/B.Sc/B.E/B.Tech/LLB/MBBS/MBA/PG Diploma ಪದವಿ, ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
- ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
* ಸಾಮಾನ್ಯ/ EWS/ OBC (NCL) ಅಭ್ಯರ್ಥಿಗಳು: ರೂ.200/- ಅರ್ಜಿ ಶುಲ್ಕವನ್ನು ಪಾವತಿಸಬೇಕು.
* SC/ST/ PwBD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 32 ವರ್ಷಗಳ ವಯೋಮಿತಿಯನ್ನು ಒಳಗೊಂಡಿರಬೇಕು.
* ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳವರೆಗೆ ನೇಮಕಾತಿಯಲ್ಲಿ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ 60,000/- ರೂ ಗಳಿಂದ 1,80,000 /- ರೂ ಗಳ ವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments