Loading..!

ಗುಲಬರ್ಗಾ ವಿದ್ಯುತ್ ಸರಬರಾಜು ಕಂಪೆನಿ ನಿಯಮಿತ (GESCOM) ಕಲಬುರಗಿ ಇಲ್ಲಿ 26 ಗ್ರಾಮ ವಿದ್ಯುತ್ ಪ್ರತಿನಿಧಿ ಹುದ್ದೆಗಳ ಆಯ್ಕೆಗೆ ಅರ್ಜಿ ಆಹ್ವಾನ
Published by: Siddaram Halli | Date:30 ಜನವರಿ 2020
not found
GESCOM Micro Feeder Franchise Recruitment 2020:
ಗುಲಬರ್ಗಾ ವಿದ್ಯುತ್ ಸರಬರಾಜು ಕಂಪೆನಿ ನಿಯಮಿತ (GESCOM) ಕಲಬುರಗಿ ಇದರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಲು ಗ್ರಾಮ ವಿದ್ಯುತ್ ಪ್ರತಿನಿಧಿ ಹುದ್ದೆಗಳ ಆಯ್ಕೆಗೆ ಅರ್ಜಿ ಆಹ್ವಾನ ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಕಲಬುರಗಿ ವೃತ್ತ ವ್ಯಾಪ್ತಿಯ ಒಟ್ಟು 26 ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮೀಣ ವಿಭಾಗ -1 ಕಲಬುರಗಿ ಹಾಗೂ ಗ್ರಾಮೀಣ ವಿಭಾಗ -2 ಕಲಬುರಗಿಗಳಲ್ಲಿ ಮೈಕ್ರೋ ಫೀಡರ್ ಫ್ರಾಂಚೈಸಿ (ಗ್ರಾಮ ವಿದ್ಯುತ್ ಪ್ರತಿನಿಧಿ) ಸ್ಥಾನಗಳು ಖಾಲಿ ಇದ್ದು ಕಂದಾಯ ವಸೂಲಿ ವಸೂಲಾತಿಗಾಗಿ ಪ್ರೋತ್ಸಾಹ ಧನದ ಆಧಾರದ ಮೇಲೆ ಆಯ್ಕೆ ಮಾಡಲು ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆರಂಭ ದಿನಾಂಕ : 30 ಜನವರಿ 2020 ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12 ಫೆಬ್ರುವರಿ 2020 ಸಾಯಂಕಾಲ 05:00 ಗಂಟೆಯೊಳಗಾಗಿ

ಅರ್ಜಿ ಸಲ್ಲಿಸುವ ವಿಧಾನ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಕೇಳಲಾಗಿರುವ ಎಲ್ಲ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಿ ಹಾಗೂ ಅವಶ್ಯಕ ಮೂಲ ದಾಖಲಾತಿಗಳ ನಕಲು ಪ್ರತಿಗಳನ್ನು ಲಗತ್ತಿಸಿ ಕೊನೆಯ ದಿನಾಂಕದೊಳಗಾಗಿ ಈ ಕೆಳಗೆ ನೀಡಿರುವ ವಿಳಾಸಕ್ಕೆ ತಲುಪುವಂತೆ ಅರ್ಜಿಗಳನ್ನು ಸಲ್ಲಿಸಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ರೂಪಾಯಿ 500 ರೂ ಡಿಮ್ಯಾಂಡ್ ಡ್ರಾಫ್ಟ್ ಅನ್ನು ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಪಡೆದು ಲಗತ್ತಿಸಬೇಕು.

ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆಯನ್ನು ಅಭ್ಯರ್ಥಿಗಳು ಡೌನ್ಲೋಡ್ ಮಾಡಿಕೊಂಡು ಓದಿ ಕೊಳ್ಳಬಹುದಾಗಿದೆ

GESCOM Micro Feeder Franchise Recruitment 2020
No. of posts:  26
Application Start Date:  30 ಜನವರಿ 2020
Application End Date:  12 ಫೆಬ್ರುವರಿ 2020
Work Location:  ಗುಲಬರ್ಗಾ
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು:
* ಅಭ್ಯರ್ಥಿಯು ಕನಿಷ್ಠ ಯಾವುದಾದರೂ ಒಂದು ವಿದ್ಯಾರ್ಹತೆಯನ್ನು ಹೊಂದಿರಬೇಕು ಡಿಪ್ಲೊಮಾ, ಐಟಿಐ, ಜೆಓಸಿ, ಪಿಯುಸಿ, ಎಸ್ಎಸ್ಎಲ್ ಸಿ (ಡಿಪ್ಲೊಮಾ, ಐಟಿಐ, ಜೆಓಸಿ ಅಭ್ಯರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು)
* ಅಭ್ಯರ್ಥಿಗಳಿಗೆ ಕಡ್ಡಾಯವಾಗಿ ಕನ್ನಡ ಓದಲು ಮತ್ತು ಬರೆಯಲು ಬರಬೇಕು
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಪೂರೈಸಿರಬೇಕು ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.

ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಅಧಿಸೂಚನೆಯಲ್ಲಿ ನೀಡಿರುವ ನಮೂನೆಯಲ್ಲಿ ತಯಾರಿಸಿದ ಅರ್ಜಿಯನ್ನು ಭರ್ತಿ ಮಾಡಿ ಅದರ ಜೊತೆಗೆ ಸಂಬಂಧಿಸಿದ ಎಲ್ಲ ಪ್ರಮಾಣ ಪತ್ರಗಳನ್ನು ಸ್ವಯಂ ದೃಢೀಕರಿಸಿ ದಿನಾಂಕ 31 ಜನವರಿ 2020 ರೊಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಬಂದು "ವಿಭಾಗೀಯ ಕಚೇರಿ"ಗೆ ಸಲ್ಲಿಸತಕ್ಕದ್ದು.

* ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಇಲಾಖೆಯು ಪ್ರಕಟಿಸಿದ ಪತ್ರಿಕಾ ಪ್ರಕಟಣೆಯನ್ನು ಡೌನ್ ಲೋಡ್ ಮಾಡಿಕೊಂಡು ಓದಿ ಕೊಳ್ಳಬಹುದಾಗಿದೆ
to download official notification GESCOM Micro Feeder Franchise Recruitment 2020
to download Application Format GESCOM Micro Feeder Franchise Recruitment 2020
ನೀವು ಪೊಲೀಸ್ ಕಾನ್ಸಟೇಬಲ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ

Comments

Subhash Chalawadi ಜನ. 31, 2020, 12:34 ಅಪರಾಹ್ನ
Sachin Holikeri ಫೆಬ್ರ. 4, 2020, 10:09 ಅಪರಾಹ್ನ
Sachin Holikeri ಫೆಬ್ರ. 4, 2020, 10:09 ಅಪರಾಹ್ನ
Suresh Suresh ಫೆಬ್ರ. 8, 2020, 5:49 ಅಪರಾಹ್ನ