ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತದಿಂದ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ | ಈ ಕುರಿತ ವಿವರ ನಿಮಗಾಗಿ

ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿ ಖಾಲಿ ಇರುವ ಗ್ರಾಜುಯೇಟ್ ಮತ್ತು ಡಿಪ್ಲೊಮಾ ಅಪ್ರೆಂಟೀಸ್ ಹುದ್ದೆಗಳನ್ನು ಒಂದು ವರ್ಷದ ಅವಧಿಯವರೆಗೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 08/12/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 135
ಗ್ರಾಜುಯೇಟ್ ಅಪ್ರೆಂಟಿಸ್ - 100
ಡಿಪ್ಲೊಮಾ ಅಪ್ರೆಂಟಿಸ್ - 35
ಅರ್ಜಿ ಸಲ್ಲಿಸುವ ವಿಳಾಸ :
ಪ್ರಧಾನ ವ್ಯವಸ್ಥಾಪಕರು, ನಿಗಮ ಕಚೇರಿ
ಗು,ವಿ,ಸ,ಕಂ,ನಿ( ಜೆಸ್ಕಾಂ)
ಸ್ಟೇಷನ್ ರೋಡ್ ಗುಲ್ಬರ್ಗಾ - 585102
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು B.E/ Deploma ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿಯ ನಿಯಮಗಳ ಪ್ರಕಾರ ವಯೋಮಿತಿಯನ್ನು ಹೊಂದಿರತಕ್ಕದ್ದು.





Comments