ಸರ್ಕಾರಿ ಉಪಕರಣಾ ಮತ್ತು ತರಬೇತಿ ಕೇಂದ್ರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ l ಕೂಡಲೇ ಅರ್ಜಿ ಸಲ್ಲಿಸಿ

ಸರ್ಕಾರಿ ಉಪಕರಣಾ ಮತ್ತು ತರಬೇತಿ ಕೇಂದ್ರದ ಮಾಗಡಿ ಮತ್ತು ದೇವನಹಳ್ಳಿಯಲ್ಲಿ ನೂತನ ಕೇಂದ್ರಗಳಲ್ಲಿ ಖಾಲಿ ಇರುವ ಉಪನ್ಯಾಸಕರು, ಬೋಧಕರು, ಟೆಕ್ನಿಷಿಯನ್ ಮತ್ತು ಲೈಬ್ರರಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 18 ಜನೆವರಿ 2023 ರೊಳಗಾಗಿ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ : 42
ಮಾಗಡಿ ತರಬೇತಿಕೇಂದ್ರದಲ್ಲಿಒಟ್ಟು : 21ಹುದ್ದೆಗಳು
ದೇವನಹಳ್ಳಿತರಬೇತಿ ಕೇಂದ್ರದಲ್ಲಿಒಟ್ಟು : 21ಹುದ್ದೆಗಳು
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಸರ್ಕಾರಿ ಉಪಕರಣಾ ಮತ್ತು ತರಬೇತಿ ಕೇಂದ್ರದ ನಿಯಮಾನುಸಾರದಂತೆ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯಸ್ಸು ಹಾಗೂ ಗರಿಷ್ಠ 45 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 18,000 /- ರೂ ಗಳಿಂದ 25,000 /- ರೂ ಗಳವರೆಗೆ ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments