ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಜಿಟಿಟಿಸಿ ಯು ತನ್ನ ತರಬೇತಿ ಕೇಂದ್ರಗಳಾದ ಶಿವಮೊಗ್ಗ, ಕಡೂರು, ಗೌರಿಬಿದನೂರು ಮತ್ತು ಹುಮ್ನಾಬಾದ್ ಕೇಂದ್ರಗಳಲ್ಲಿನ ಪ್ರಾಂಶುಪಾಲರ ಹುದ್ದೆಗಳಿಗೆ ಸಂವಹನ ಕಲೆ, ನಾಯಕತ್ವದ ಗುಣ, ಸಮಸ್ಯೆಗಳನ್ನು ಪರಿಹರಿಸುವ ಮನೋಸ್ಥಿತಿಯುಳ್ಳ ತಾಂತ್ರಿಕ ಪರಿಣಿತಿ ಹೊಂದಿರುವ ಹಾಗೂ ಟೂಲ್ ರೂಮ್ ಮತ್ತು ಟ್ರೈನಿಂಗ್ ಸೆಂಟರ್ ಚಟುವಟಿಕೆಗಳನ್ನು ನಿರ್ವಹಿಸುವ ಸಾಮರ್ಥ್ಯ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು ಈ ಕೆಳಗಿನ ವಿಳಾಸಕ್ಕೆ ನಿಗದಿಪಡಿಸಿದ ಕೊನೆಯ ದಿನಾಂಕವಾದ : 30-11-2021ರ ಸಂಜೆ 05:30 ಗಂಟೆಯೊಳಗೆ ಲಕೋಟೆಯ ಮೇಲ್ಭಾಗದ ಎಡ ಬದಿಯಲ್ಲಿ ಪ್ರಾಂಶುಪಾಲರು ಹುದ್ದೆಗೆ ಎಂದು ನಮೂದಿಸಿ ಅರ್ಜಿ ಸಲ್ಲಿಸತಕ್ಕದ್ದು.
ಅರ್ಜಿ ಕಳುಹಿಸುವ ವಿಳಾಸ :
ವ್ಯವಸ್ಥಾಪಕ ನಿರ್ದೇಶಕರು,
ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ರಾಜಾಜಿನಗರ
ಕೈಗಾರಿಕಾ ವಸಾಹತು, ಬೆಂಗಳೂರು-560010
AICTE ಯಿಂದ ಅನುಮೋದಿತವಾದ ಮತ್ತು ಮಾನ್ಯತೆ ಹೊಂದಿರುವ ವಿಶ್ವವಿದ್ಯಾಲಯದಿಂದ ಮೆಕ್ಯಾನಿಕಲ್ ಇಂಜಿನಿಯರಿಂಗ್/ಟೂಲ್ ಇಂಜಿನಿಯರಿಂಗ್ ವಿಷಯದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಸಮಾನಾಂತರವಾದ ಸ್ನಾತಕ ಪದವಿ ಮತ್ತು ಸ್ನಾತಕೋತ್ತರ ಪದವಿಗಳಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿರಬೇಕು. ಜೊತೆಗೆ AICTE ಯಿಂದ ಅನುಮೋದಿತವಾದ ಮತ್ತು ಮಾನ್ಯತೆ ಹೊಂದಿರುವ ಎಂಜಿನಿಯರಿಂಗ್ ಕಾಲೇಜು ಅಥವಾ ಕೇಂದ್ರಗಳಲ್ಲಿ 5 ವರ್ಷಗಳ ಬೋಧನಾ ಅನುಭವ ಹೊಂದಿರಬೇಕು.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments