ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಕೇಂದ್ರ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿ ಖಾಲಿ ಇರುವ 57 ಡಿಪ್ಲೋಮಾ ಟೆಕ್ನಿಷನ್ ಮತ್ತು ಆಪರೇಟರ್ ಹುದ್ದೆಗಳ ನೇಮಕಾತಿಗಾಗಿ ಆಯ್ಕೆ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಹುದ್ದೆಗಳ ವಿವಿರ : 57
Diploma Technician (Mechanical) – 8 posts
Diploma Technician (Mechanical) – FSR – 2 posts
Diploma Technician (Electrical) – 2 posts
Diploma Technician (Electrical) – FSR – 3 posts
Diploma Technician (Electronics) – 21 posts
Diploma Technician (Electronics) – FSR – 14 posts
Diploma Technician (Chemical) – 1 post
Operator (Electronic Mechanic) – 2 posts
Operator (Fitter) – 1 post
Operator (Painter) – 2 posts
Operator (Turner) – 1 post
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಗರಿಷ್ಠ 28 ವರ್ಷ ವಯೋಮಿತಿಯನ್ನು ಮೀರಿರಬಾರದು.
- ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಈ ಕೆಳಗಿನಂತೆ ಮಾಸಿಕ ವೇತನವನ್ನು ನೀಡಲಾಗುತ್ತದೆ.
- Diploma Technician : 23000
- Operator : 22000
* ಈ ನೇಮಕಾತಿಯ ಕುರಿತು ಹೆಚ್ಚಿನ 0ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments