ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕೇಂದ್ರ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ದಲ್ಲಿ ಖಾಲಿ ಇರುವ 02 ವೈದ್ಯಕೀಯ ಅಧಿಕಾರಿ (ಜನರಲ್ ಡ್ಯೂಟಿ) ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 13/05/2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು.
ಅರ್ಜಿ ಸಲ್ಲಿಸುವ ವಿಳಾಸ :
Chief Manager (HR) Hindustan
Aeronautics Limited Industrial Health Center,
Suranjandas Road, Vimanapura Post,
Bangalore-560017
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು MBBS ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 87,880/- ರೂಗಳವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments