ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಭಾರತದ ಚಿನ್ನ ಉತ್ಪಾದನೆಯಲ್ಲಿ ಆಗ್ರಾ ಸ್ಥಾನದಲ್ಲಿರುವ ಹಟ್ಟಿ ಚಿನ್ನದ ಗಣಿ ಕಂಪನಿಯ ವಿವಿಧ ವಿಭಾಗಗಳಲ್ಲಿ ಸ್ಥಳೀಯ ವೃಂದದಲ್ಲಿ ಖಾಲಿ ಇರುವ 216 ಹುದ್ದೆಗಳನ್ನು ನೇರ ನೇಮಕಾತಿಯ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 09/07/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ: 216
* E-3ದರ್ಜೆಯ ಮಾನೇಜ್‌ಮೆಂಟ್ - 29
* G-5 ದರ್ಜೆಯ ಹುದ್ದೆಗಳು - 51
* G-8 ದರ್ಜೆಯ ಹುದ್ದೆಗಳು - 136
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳಿಗೆ ದೈಹಿಕ ಪರೀಕ್ಷೆ, ಸಹಿಷ್ಣುತಾ ಪರೀಕ್ಷೆ ಹಾಗೂ ವೈದ್ಯಕೀಯ ಪರೀಕ್ಷೆಯನ್ನು ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ BE/ MSC/ MBA/ Diploma/ BSc/ B.Form/ ITI/ PUC/ ANM/ ಸ್ನಾತಕೋತ್ತರ ಪದವಿ/ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು, ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಅಧಿಸೂಚನೆಯನ್ನು ಗಮನಿಸಬೇಕು
* ಪ.ಜಾ / ಪ.ಪಂ , ಪ್ರವರ್ಗ -1 , ಮಾಜಿ ಸೈನಿಕ ಮತ್ತು ವಿಶೇಷಚೇತನ ಅಭ್ಯರ್ಥಿಗಳಾದಲ್ಲಿ, ರೂ .100/-
* ಹಿಂದುಳಿದ ವರ್ಗದ (2 ಎ , 2 ಬಿ , 3 ಎ , 3 ಬಿ) ಅಭ್ಯರ್ಥಿಗಳಾದಲ್ಲಿ ರೂ . 300/- ಮತ್ತು
* ಸಾಮಾನ್ಯ ಅಭ್ಯರ್ಥಿಗಳಾದಲ್ಲಿ ರೂ .600 / - ರೂ ಗಳ ಶುಲ್ಕವನ್ನುಆನ್ ಲೈನ್ ಮೂಲಕ ಪಾವತಿಸಬೇಕು.
* ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಸಾಮಾನ್ಯ ಅಭ್ಯರ್ಥಿಗೆ 35 ವರ್ಷ
* ಪ್ರವರ್ಗ -2A/ 2B/ 3A/ 3B ಗೆ ಗರಿಷ್ಠ 38 ವರ್ಷಗಳು ಮತ್ತು
* ಪ.ಜಾ. /ಪ.ಪಂ. ಮತ್ತು ಪ್ರವರ್ಗ-1 ಕ್ಕೆ ಗರಿಷ್ಟ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 20,920 - 81,200ರೂ ಗಳ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments